ವಿಧಾನ ಪರಿಷತ್ ಚುನಾವಣೆ: ಮಟ್ಟೂರು ಪರ ವಸಂತಕುಮಾರ್ ಮತಯಾಚನೆ . ಜಯ ಧ್ವಜ ನ್ಯೂಸ್ , ರಾಯಚೂರು, ಅ.18 - ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ನಿನ್ನೆ ವಿವಿಧ ಪದವಿ ಕಾಲೇಜುಗಳ ಉಪನ್ಯಸಕರನ್ನು ಹಾಗೂ ಪ್ರೌಡ ಶಾಲೆಗಳಶಿಕ್ಷಕರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಎ.ವಸಂತಕುಮಾರ ಅವರು ಕಾಂಗ್ರೆಸ್ ಪಕ್ಷದ ಸರಕಾರವು ಈ ಭಾಗದ ಪದವಿ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸುತ್ತಿದೆ, ವಿಶೇಷವಾಗಿ ಅತಿಥಿ ಉಪನ್ಯಾಕರ ನೇಮಕಾತಿ ಮತ್ತು ಗೌರವಧನ ಬಿಡುಗಡೆಗೆ ಕ್ರಮವಹಿಸಲಾಗುತ್ತಿದೆ, ಖಾಸಗಿ ಕಾಲೇಜುಗಳ ಅನುಮತಿ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುತ್ತಿದೆ. ಪದವಿ ಮಹಾವಿದ್ಯಾಲಯದಲ್ಲಿ ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ...