ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಹೆಚ್ಚಿನ ನಿಗಾ ವಹಿಸಿ: ನಿಖಿಲ್.ಬಿ
ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಹೆಚ್ಚಿನ ನಿಗಾ ವಹಿಸಿ: ನಿಖಿಲ್.ಬಿ
ರಾಯಚೂರು ಮಾ.28- ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಣಿಗಾರಿಕೆ ತಡೆಯಲು, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಒಟ್ಟಾಗಿ ಕಾರ್ಯನಿರ್ವಹಿಸಬೇಕಾಗಿದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಸಂಬoಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಾ.28ರ ಸೋಮವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಮರಳು ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ, ಹಾಗೂ ಸಾಗಾಣಿಕೆ ಸಂಬoಧಿಸಿದAತೆ ಸರ್ವೋಚ್ಛ ನ್ಯಾಯಾಲಯದಿಂದ ಆದೇಶಗಳನ್ನು ಹೊರಡಿಸಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟು ಅನಧೀಕೃತ ಮರಳು ಸಾಗಾಣಿಕೆಯಾಗದಂತೆ ನಿಗಾ ವಹಿಸಬೇಕಾಗಿದ್ದು, ತನಿಖಾ ಠಾಣೆಗಳಿಗೆ ಪ್ರತಿ ನಿತ್ಯ ಶಿಫ್ಟ್ಗಳಂತೆ ಠಾಣೆಯ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿ ಮತ್ತು ಮರಳು ಸಮಿತಿ ಸದಸ್ಯರ ತಂಡದೊAದಿಗೆ ತನಿಖಾ ಠಾಣೆಗಳ ಮೂಲಕ ಪರವಾನಿಗೆ ಇಲ್ಲದೇ ಹಾಗೂ ಪರವಾನಿಗೆ ಮೀರಿ ಹೆಚ್ಚಿನ ಪ್ರಮಾಣದ ಮರಳು ಸಾಗಾಣಿಕೆ ಮಾಡುವ ವಾಹನಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಮ ಮರಳು ಸಾಗಿಸುವ ವೇಳೆಯಲ್ಲಿ ವಿಡಿಯೋ ಹಾಗೂ ಛಾಯಾಚಿತ್ರ ತೆಗೆದು ದಾಖಲೆ ತಯಾರಿಸಿಕೊಳ್ಳಬೇಕು. ದಾಖಲೆ ತಯಾರಿಸದೇ ಇದ್ದ ಪಕ್ಷದಲ್ಲಿ, ವಾಹನ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ಹೂಡುವ ಪ್ರಕರಣ ವಜಾಗೊಳ್ಳುವ ಸಂಭವವಿರುತ್ತದೆ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲೂಕ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ರಚಿಸಿ ಹೆಚ್ಚಿನ ಪ್ರಮಾಣದ ಲೋಡ್‌ಗಳನ್ನು ಹೊಂದಿರುವ ಮರಳು ವಾಹನಗಳನ್ನು ತಡೆದು ವಿಚಾರಣೆ ನಡೆಸಬೇಕು, ಜಿಲ್ಲೆಯ ಕಾಡ್ಲೂರು, ಕರೇಕಲ್, ದೇವದುರ್ಗ ಭಾಗಗಳಲ್ಲಿ ಹೆಚ್ಚಾಗಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಿದ್ದು, ದೇವದುರ್ಗದ ಆರ್‌ಟಿಐ ಕಾರ್ಯಕರ್ತರೊಬ್ಬರಿಂದ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅಕ್ರಮ ಮರಳು ತಡೆಗಟ್ಟುವಲ್ಲಿ ಸಂಬAಧಪಟ್ಟ ಇಲಾಖೆ ವಿಫಲವಾಗಿರುವ ಬಗ್ಗೆ ದೂರು ಸಲ್ಲಿಸಲಾಗಿದೆ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಅವರು ಮಾತನಾಡಿ, ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟಲು ಇರುವ ಕಾಯಿದೆ ಕಾನೂನನ್ನು ಸರಿಯಾಗಿ ಬಳಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕಿರಣ ಕುಮಾರ್, ಸಾರಿಗೆ ಅಧಿಕಾರಿ ವಿನಯ್ ಕಟ್ಟೋಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
Comments
Post a Comment