ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ- ಆರ್.ವೆಂಕಟೇಶ ಕುಮಾರ್
ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ- ಆರ್.ವೆಂಕಟೇಶ ಕುಮಾರ್ ರಾಯಚೂರು ಏ.30- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಾದ ಆರ್.ವೆಂಕಟೇಶ ಕುಮಾರ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಏ.30ರ ಶನಿವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಪ್ರಸಕ್ತ ವರ್ಷದ ಕಾಮಗಾರಿಗಳು, ಅನುಷ್ಠಾನ ಅಧಿಕಾರಿಗಳ ಬದಲಾವಣೆ ಮಾಡಬೇಕಿದ್ದರೆ, ಕ್ರಿಯಾಯೋಜನೆ ಅನುಮೋದನೆಯಾದ ಹದಿನೈದು ದಿನಗಳ ಒಳಗಾಗಿ ಬದಲಾವಣೆ ಪ್ರಸ್ತಾವನೆಗಳನ್ನು ಮಂಡಳಿಗೆ ಸಲ್ಲಿಸಬೇಕು. ಒಂದು ವೇಳೆ ವಿಳಂಬವಾದರೆ ಅನುಷ್ಠಾನ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು. ಪ್ರಸಕ್ತ ಸಾಲಿಗೆ ಅನುಮೋದನೆಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ ಇನ್ನೂ ಪ್ರಾರಂಭಿಸದೇ ಇರುವ ಕಾಮಗಾರಿಗಳನ್ನು ವಿಳಂಬ ಮಾಡದೆ ಪ್ರಾರಂಭಿಸಬೇಕು. ಒಂದು ವೇಳೆ ವಿಳಂಬ ಮಾಡಿದರೆ ಅಂತಹ ಕಾಮಗಾರಿಗಳನ್ನು ರದ್ದುಗೊಳಿಸಲ...