ಏ.22ರಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪರಿಂದ ಜಿಲ್ಲಾ ಪ್ರವಾಸ
ರಾಯಚೂರು ಏ.20- ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ.ಪಾಟೀಲ್ ಮುನೇನಕೊಪ್ಪ ಅವರು
ಏ.22ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸದ ವಿವರ ಇಂತಿದೆ.
ಅವರು ಏ.22ರ ಬೆಳಿಗ್ಗೆ 07ಗಂಟೆಗೆ ಕಲಬುರಗಿ ಯಿಂದ ರಸ್ತೆ ಮಾರ್ಗವಾಗಿ ಬೆಳಿಗ್ಗೆ 10ಗಂಟೆಗೆ ರಾಯಚೂರಿಗೆ ಆಗಮಿಸಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 01ಗಂಟೆಗೆ ರಾಯಚೂರು, ಸಿಂಧನೂರು ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ವಿಶೇಷ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments
Post a Comment