ಏ.28 ರಂದು ಜಿಲ್ಲೆಗೆ ಗಣಿ ಸಚಿವ ಹಾಲಪ್ಪಆಚಾರ

 

ರಾಯಚೂರು ಏ.25- ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಇದೇ ಏ.28 ಹಾಗೂ 29ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.        


ಅವರ ಪ್ರವಾಸದ ವಿವರ ಇಂತಿದೆ;

ಅವರು ಏ.28ರ ಮಧ್ಯಾಹ್ನ 2.30ಗಂಟೆಗೆ ರಸ್ತೆ ಮಾರ್ಗವಾಗಿ ಯಾದಗಿರಿ ಜಿಲ್ಲೆಯಿಂದ ನಿರ್ಗಮಿಸಿ ಸಂಜೆ 4.30ರಿಂದ 7.30ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ. ರಾತ್ರಿ 09ಗಂಟೆಗೆ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.  


ಏ.29ರ ಬೆಳಿಗ್ಗೆ 10ಯಿಂದ ಸಂಜೆ 4ಗಂಟೆಯವರೆಗೆ ಹಟ್ಟಿ ಚಿನ್ನದ ಗಣಿ ಪರಿವೀಕ್ಷಣೆ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.  


ಸಂಜೆ 4ಗಂಟೆಗೆ ಜಿಲ್ಲೆಯಿಂದ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ