ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಥಮ ಜಿಲ್ಲಾ ಕಾರ್ಯಕಾರಿಣಿ ಸಭೆ
ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಥಮ ಜಿಲ್ಲಾ ಕಾರ್ಯಕಾರಿಣಿ ಸಭೆ
ರಾಯಚೂರು,ಏ.20- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಥಮ ಜಿಲ್ಲಾ ಕಾರ್ಯಾಕಾರಣಿ ಸಭೆ ಸಂಘದ ಅಧ್ಯಕ್ಷ ಆರ್.ಗುರುನಾಥರವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಇಂದು ನಡೆಯಿತು. 2022-23ನೇ ಸಾಲಿನ ಸಂಘದ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜನೆ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಉಪಾಧ್ಯಕ್ಷ ಶಿವಪ್ಪ ಮಡಿವಾಳರ್, ಪಿ.ಪರಮೇಶ, ಪ್ರಧಾನ ಕಾರ್ಯದರ್ಶಿ ಎಂ.ಪಾಷ ಹಟ್ಟಿ, ಕಾರ್ಯದರ್ಶಿಗಳಾದ ಅಬ್ದುಲ್ ಅಜೀಜ್, ಸೂಗೂರೇಶ್ವರ ಗುಡಿ, ಶರಣಬಸವ ನೀರಮಾನ್ವಿ, ಖಜಾಂಚಿ ವೆಂಕಟೇಶ ಹೂಗಾರ,ನಿಕಟಪೂರ್ವ ಅಧ್ಯಕ್ಷ ಬಸವರಾಜ ನಾಗಡದಿನ್ನಿ ಸೇರಿದಂತೆ ಜಿಲ್ಲಾ ಕಾರ್ಯಕಾರಣಿ ಸದಸ್ಯರು ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎಂ.ಪಾಷ ಸ್ವಾಗತಿಸಿದರು. ಕಾರ್ಯದರ್ಶಿ ಅಬ್ದುಲ್ ಅಜೀಜ್ ವಂದಿಸಿದರು.
Comments
Post a Comment