ನೂತನ ಜಿಲ್ಲಾಧಿಕಾರಿಗಳಿಂದ ಅಧಿಕಾರ ಸ್ವೀಕಾರ

 


ನೂತನ ಜಿಲ್ಲಾಧಿಕಾರಿಗಳಿಂದ ಅಧಿಕಾರ ಸ್ವೀಕಾರ
ರಾಯಚೂರು ಏ.19, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಲ್.ಚಂದ್ರಶೇಖರ ನಾಯಕ ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. 

ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಹಾಗೂ ರಾಯಚೂರು ಸಹಾಯಕ ಆಯುಕ್ತ ರಜನಿಕಾಂತ್ ಸೇರಿದಂತೆ ಇತರೆ ಅಧಿಕಾರಿಗಳು  ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿದರು.
 
ಈ ಹಿಂದೆ ಬೆಂಗಳೂರಿನಲ್ಲಿ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಲ್.ಚಂದ್ರಶೇಖರ ನಾಯಕ ಅವರನ್ನು ಇದೇ ಏ.18ರಂದು ರಾಜ್ಯ ಸರಕಾರ, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. 

ಇದೇ ಸಂದರ್ಭದಲ್ಲಿ ತಹಸೀಲ್ದಾರಗಳಾದ ಡಾ.ಹಂಪಣ್ಣ ಸಜ್ಜನ್, ಮಂಜುನಾಥ ಬೋಗಾವತಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. 

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ