ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ- ಆರ್.ವೆಂಕಟೇಶ ಕುಮಾರ್

 

ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ- ಆರ್.ವೆಂಕಟೇಶ ಕುಮಾರ್
ರಾಯಚೂರು ಏ.30- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಾದ ಆರ್.ವೆಂಕಟೇಶ ಕುಮಾರ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.   

ಅವರು ಏ.30ರ ಶನಿವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪ್ರಸಕ್ತ ವರ್ಷದ ಕಾಮಗಾರಿಗಳು, ಅನುಷ್ಠಾನ ಅಧಿಕಾರಿಗಳ  ಬದಲಾವಣೆ ಮಾಡಬೇಕಿದ್ದರೆ, ಕ್ರಿಯಾಯೋಜನೆ ಅನುಮೋದನೆಯಾದ ಹದಿನೈದು ದಿನಗಳ ಒಳಗಾಗಿ ಬದಲಾವಣೆ ಪ್ರಸ್ತಾವನೆಗಳನ್ನು ಮಂಡಳಿಗೆ ಸಲ್ಲಿಸಬೇಕು. ಒಂದು ವೇಳೆ ವಿಳಂಬವಾದರೆ ಅನುಷ್ಠಾನ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು  ಎಂದರು.

ಪ್ರಸಕ್ತ ಸಾಲಿಗೆ ಅನುಮೋದನೆಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ ಇನ್ನೂ ಪ್ರಾರಂಭಿಸದೇ ಇರುವ ಕಾಮಗಾರಿಗಳನ್ನು ವಿಳಂಬ ಮಾಡದೆ ಪ್ರಾರಂಭಿಸಬೇಕು. ಒಂದು ವೇಳೆ ವಿಳಂಬ ಮಾಡಿದರೆ ಅಂತಹ ಕಾಮಗಾರಿಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಕ್ರಿಯಾಯೋಜನೆ ಅನ್ವಯ ಹಂಚಿಕೆ ಮಾಡಲಾಗುತ್ತದೆ. ಹಂಚಿಕೆಯಾದ ಅನುದಾನವನ್ನು ಶೇಕಡ 100ರಷ್ಟು ಬಳಕೆಯಾಗಬೇಕು. ಸರ್ಕಾರ ಒದಗಿಸುವ ಅನುದಾನದಲ್ಲಿ ಸಾಮಾಜಿಕ ಕಲ್ಯಾಣದ ಜೊತೆಗೆ ಮೂಲಸೌಲಭ್ಯ ಹಾಗೂ ಅಭಿವೃದ್ಧಿ  ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾಮಗಾರಿಗಳು ಪೂರ್ಣಗೊಳಿಸಿ: ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೈಗೆತ್ತಿಕೊಳ್ಳಲಾದ ಶಾಲಾ-ಕಾಲೇಜುಗಳ ಕಟ್ಟಡಗಳು, ಆರ್.ಓ.ಪ್ಲಾಂಟ್, ಕುಡಿಯುವ ನೀರಿನ ಪೈಪಲೈನ್ ಕಾಮಗಾರಿಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಕಾಳಜಿವಹಿಸಿ ಕೂಡಲೇ ಪೂರ್ಣಗೊಳಿಸಬೇಕು. ಅಲ್ಲದೆ ಕಾಮಗಾರಿ ಕುರಿತು ಕಾಲಕಾಲಕ್ಕೆ ಮೇಲಾಧಿಕಾರಿಗಳಿಗೆ ಸಂಬAಧ ಪಟ್ಟ ಅಧಿಕಾರಿಗಳು ಮಾಹಿತಿ ನೀಡಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಎಲ್.ಚಂದ್ರಶೇಖರ ನಾಯಕ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇ.ಇ ಮೋನಿಕಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.  

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ