1098 ಸಹಾಯವಾಣಿಗೆ ಕರೆ ಮಾಡುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಿ-ನ್ಯಾ.ದಯಾನಂದ

1098   ಸಹಾಯವಾಣಿಗೆ ಕರೆ ಮಾಡುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಿ-ನ್ಯಾ.ದಯಾನಂದ

ರಾಯಚೂರು ಮೇ.17, ಸಮಸ್ಯೆಗೆ ದಿನದ 24 ಗಂಟೆಯೂ ಸ್ಪಂದಿಸುವ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡುವ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆಂದು ಇಲ್ಲಿಯ ಮೂರನೇಯ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಧೀಶರಾದ ದಯಾನಂದ ಬೇಲೂರೆ ಅವರು ಹೇಳಿದರು.      


ಅವರು ಮೇ.17ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಹಾಗೂ ಮಕ್ಕಳ ಸಹಾಯವಾಣಿ-1098 ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಹಾಯವಾಣಿ-1098 ದಿನಾಚರಣೆ ಹಾಗೂ ಮಾಸಾಚರಣೆ ಜಾಥಕ್ಕೆ ಚಾಲನೆ ನೀಡಿ, ಮಾತನಾಡಿದರು.


ಸಮಸ್ಯೆಯಲ್ಲಿರುವಾಗ ಯಾರ ನೆರವು ಕೋರಬೇಕು ಎಂದು ಮಕ್ಕಳಿಗೆ ತಿಳಿದಿರುವುದಿಲ್ಲ, ಅಂತಹ ಸಂದರ್ಭ 1098ಕ್ಕೆ ಉಚಿತ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು ಎಂದರು.


ಮಕ್ಕಳ ಮೇಲೆ ಎದುರಾಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸಹಕಾರಿಯಾಗಿದೆ. 0 ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳು ತಮಗೆ ಯಾವುದೇ ಸಮಸ್ಯೆ ಎದುರಾದಲ್ಲಿ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಹೇಳಿದರು. 


ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಮಾತನಾಡಿ, ದುಡಿವ ವರ್ಗದ ಮಕ್ಕಳು ಹೆಚ್ಚಾಗಿ ಇಂತಹ ಸಮಸ್ಯೆಗೆ ಒಳಗಾಗುತ್ತಾರೆ. ಅವರು ಮೂಢನಂಬಿಕೆ ಹಾಗೂ ಸಮಾಜದ ಕಟ್ಟುಪಾಡುಗಳಿಂದ ಹೊರಬಂದಾಗ ಮಾತ್ರ ಸಮಸ್ಯೆಗಳಿಂದ ಪಾರಾಗಬಹುದು ಎಂದರು.


ಬಾಲ ಕಾರ್ಮಿಕ ಪದ್ಧತಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಅದರ ನಿವಾರಣೆಗೆ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು. ಇದರಿಂದ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಸಾಧ್ಯ ಎಂದರು.


ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗಾಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮಕ್ಕಳಲ್ಲಿ ಪೋಷ್ಟಿಕಾಂಶ ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. 


ಇದೇ ಸಂದರ್ಭದಲ್ಲಿ ವಿಶೇಷ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೆಂಕಟಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ಮನ್ಸೂರ್ ಅಹ್ಮದ್, ಸಾಂಸ್ಥಿಕ ಮಕ್ಕಳ ರಕ್ಷಣಾಧಿಕಾರಿ ಹನುಮೇಶ ಅತ್ತನೂರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.  

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್