ಜಾಗೀರ ವೆಂಕಟಾಪೂರು: ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ

 ಸಮಗ್ರ ಕೃಷಿ ಅಭಿಯಾನ ವಾಹನಗಳಿಗೆ ಶಾಸಕರಿಂದ ಚಾಲನೆ

ರಾಯಚೂರು ಮೇ.27- ತಾಲೂಕಿನ ಕಲ್ಮಲಾ ಹೋಬಳಿಯ ಜಾಗೀರ ವೆಂಕಟಾಪೂರು ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಹಾಗೂ ಕೃಷಿ ಮತ್ತು ಕೃಷಿಗೆ ಸಂಬAಧಿಸಿದ ಇತರೆ  ಇಲಾಖೆಗಳ ಸಹಯೋಗದೊಂದಿಗೆ ಸಮಗ್ರ ಕೃಷಿ ಅಭಿಯಾನದ ವಾಹನಗಳಿಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು.


ಈ ವೇಳೆ ಮಾತನಾಡಿದ ಅವರು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಿ. ಅಲ್ಲದೆ ರಸಗೊಬ್ಬರವು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ಮೇಲೆ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

     

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಪ್ರಾಣೇಶ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೂರ ಜಹಾರ್ ಖಾನಂ, ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ರಾಯಚೂರು ತಾಲೂಕು ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ, ರಾಯಚೂರಿನ ಕೃಷಿ ಇಲಾಖೆಯ ಉಪ ನಿರ್ದೇಶಕ ನಯೀಮ್ ಹುಸೇನ್, ರಾಯಚೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪಲತಾ ಸೇರಿದಂತೆ ಇತರರು ಇದ್ದರು.    

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್