ಶುಕ್ರವಾರ ದಂದು ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ: ಕಲ್ಮಲಾ ಹೋಬಳಿಯ ಜಾ.ವೆಂಕಟಾಪೂರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

 

ರಾಯಚೂರು ಮೇ.25-“ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ’’ ಎಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲೆಯಲ್ಲಿ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವಂತೆ ಸರ್ಕಾರ ಸೂಚಿಸಿದ್ದು, ಇದೇ ಮೇ.27ರ ಶುಕ್ರವಾರ ದಂದು ರಾಯಚೂರು ತಾಲೂಕಿನ ಕಲ್ಮಲಾ ಹೋಬಳಿಯ ಜಾಗೀರ ವೆಂಕಟಾಪೂರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ ಕಾರ್ಯಕ್ರಮ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರುಗೇಶ್ ಅವರು ತಿಳಿಸಿದ್ದಾರೆ.     


ಅಂದು ಬೆಳಿಗ್ಗೆ 10ರಿಂದ ಸಾಯಂಕಾಲ 5ಗಂಟೆವರೆಗೆ ಗ್ರಾಮವಾಸ್ತವ್ಯ ನಡೆಸಲಿದ್ದು, ಪ್ರಮುಖವಾಗಿ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.


ಜಾಗೀರ ವೆಂಕಟಾಪೂರ ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಅದೇ ದಿನ ಇನ್ನುಳಿದ ತಾಲ್ಲೂಕುಗಳಲ್ಲಿ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿಸಿದರು.  


ಪಹಣಿಯಲ್ಲಿನ ಲೋಪದೋಷಗಳ ಸರಿಪಡಿಸುವಿಕೆ, ಆಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಪೌತಿ ಖಾತೆಯಲ್ಲಿ ನೈಜ ವಾರಸುದಾರರ ಹೆಸರು ಸೇರ್ಪಡೆ, ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ,  ಸ್ಮಶಾನ ಜಾಗ ಲಭ್ಯತೆ ಬಗ್ಗೆ ಪರಿಶೀಲಿಸುವುದು. ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನಿನ ಕಾಯ್ದಿರಿಸಲು ಕ್ರಮವಹಿಸುವುದು. ಸರಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು, ಆಧಾರ್ ಕಾರ್ಡಿನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ,  ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಅರ್ಹ ಅಂಗವಿಕಲರಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.  


ಹದ್ದುಬಸ್ತು, ಪೋಡಿ, ಪೋಡಿಮುಕ್ತ ಗ್ರಾಮ, ದರಕಾಸ್ತು ಪೋಡಿ ಕಂದಾಯ ಗ್ರಾಮಗಳ ರಚನೆ ಮುಂತಾದ ಕಂದಾಯ ಇಲಾಖೆಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು ಎಂದರು.


ಎಲ್ಲೆಲ್ಲಿ ಗ್ರಾಮ ವಾಸ್ತವ್ಯ: ಲಿಂಗಸೂಗೂರು ತಾಲೂಕಿನ ಗುರುಗುಂಟಾ ಹೋಬಳಿಯ ಬಂಡೆಬಾವಿ ಗ್ರಾಮದಲ್ಲಿ ಲಿಂಗಸೂಗೂರು ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಮಸ್ಕಿ ತಾಲೂಕಿನ ಹಾಲಾಪೂರ ಹೋಬಳಿಯ ಸುಂಕನೂರು ಗ್ರಾಮದಲ್ಲಿ ಮಸ್ಕಿ ತಹಶೀಲ್ದಾರ್ ಕವಿತಾ.ಆರ್, ಸಿಂಧನೂರು ತಾಲೂಕಿನ ವಲ್ಕಂದಿನ್ನಿ ಹೋಬಳಿಯ ರಾಗಲಪರ್ವಿ ಗ್ರಾಮದಲ್ಲಿ ತಹಶೀಲ್ದಾರ್ ಮಂಜುನಾಥ ಬೋಗಾವತಿ, ಮಾನ್ವಿ ತಾಲೂಕಿನ ಕುರ್ಡಿ ಹೋಬಳಿಯ ಸೀಕಲ್ ಗ್ರಾಮದಲ್ಲಿ ತಹಶೀಲ್ದಾರ್ ಎಲ್.ಡಿ ಚಂದ್ರಕಾoತ, ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ಹೇಮನಾಳ ಗ್ರಾಮದಲ್ಲಿ ತಹಶೀಲ್ದಾರ್ ಶ್ರೀನಿವಾಸ ಚಾಪಲ್, ಸಿರವಾರ ತಾಲೂಕಿನ ಮಲ್ಲಟ ಹೋಬಳಿಯ ಕುರುಕುಂದಾ ಗ್ರಾಮದಲ್ಲಿ ತಹಶೀಲ್ದಾರ್ ವಿಜಯೇಂದ್ರ ಹುಲಿನಾಯಕ ಅವರ ನೇತೃತ್ವದಲ್ಲಿ  ಗ್ರಾಮ ವಾಸ್ತವ್ಯ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್