ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳನ್ನು ಭೇಟಿಯಾದ ಕೆ.ಶಿವನಗೌಡ ನಾಯಕ

ರಾಯಚೂರು,ಮೇ.24-ನೀರಾವರಿ ಸೌಲಭ್ಯ ವಂಚಿತ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ತಾಲೂಕಿನ ವಿವಿಧೆಡೆ 29 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಬಂಧ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳನ್ನು ಬೆಂಗಳೂರಿನಲ್ಲಿ ಶಾಸಕ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ ಅವರು ಭೇಟಿಯಾಗಿ ಚರ್ಚೆ ನಡೆಸಿದರು.


ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಅಧಿಕಾರಿಗಳ ಜೊತೆಗೆ ಕೆರೆ ತುಂಬಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದ ಅವರು, ಶೀಘ್ರದಲ್ಲೇ ಕೆರೆ ತುಂಬಿಸುವ ಯೋಜನೆ ಪ್ರಾರಂಭಿಸಬೇಕಿದ್ದು ಟೆಂಡರ್ ಪ್ರಕ್ರಿಯೆಗಳನ್ನು ಆರಂಭಿಸಲು ಸೂಚಿಸಿದರು.


ಕೆರೆ ತುಂಬಿಸುವ ಯೋಜನೆಯಿಂದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದ್ದು ಅಂತರ್ಜಲ ಮಟ್ಟ ವೃದ್ಧಿಯಾಗಲಿದೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ದೇವದುರ್ಗ ತಾಲೂಕಿನ ನೀರಾವರಿ ವಂಚಿತ ಹಾಗೂ ಗುಡ್ಡಗಾಡು ಪ್ರದೇಶದ ರೈತರಿಗೆ ಈ ಯೋಜನೆ ಬಹಳ ಸಹಕಾರಿಯಾಗಲಿದೆ.


ಈಗಾಗಲೇ ದೇವದುರ್ಗ ತಾಲೂಕಿನ 29 ಕೆರೆಗಳಿಗೆ ನೀರು ತುಂಬಿಸಲು 330 ಕೋ. ರೂ. ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಮೊದಲ ಹಂತದಲ್ಲಿ 180 ಕೋ. ರೂ.‌ ವೆಚ್ಚದಲ್ಲಿ ಅರಕೇರಾ, ಆಲ್ಕೋಡ್, ಕ್ಯಾದಿಗೇರಾ, ಪಿಲಿಗುಂಡ, ಬುಂಕಲದೊಡ್ಡಿ, ಬಂಡೇಗುಡ್ಡ, ಮಲ್ಲೇನಾಯಕದೊಡ್ಡಿ ಸೇರಿದಂತೆ 9 ಕೆರೆಗಳಿಗೆ ನೀರು ತುಂಬಿಸಲಾಗುವುದು.


ಎರಡನೇ ಹಂತದಲ್ಲಿ ಇನ್ನುಳಿದ 20 ಕೆರೆಗಳ ಅಭಿವೃದ್ಧಿ ‌ಮತ್ತು ನೀರು ತುಂಬಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ತಾಲೂಕಿನ 29 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕೃಷ್ಣ ಭಾಗ್ಯ ಜಲ ನಿಗಮ ನಿರ್ವಹಣೆ ಮಾಡುತ್ತಿದ್ದು ಕೆರೆಗಳಿಗೆ ನೀರು ತುಂಬಿರುವುದರಿಂದ ಭವಿಷ್ಯ ದಿನಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು ಕೃಷಿ ಸೇರಿದಂತೆ ಇತರೆ ಚಟುವಟಿಕೆಗಳಿಗೆ ನೀರಿನ ಅಭಾವ ನಿವಾರಣೆಯಾಗಲಿದೆ.


ಈ ಸಂದರ್ಭದಲ್ಲಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್,‌ ಮಾಜಿ ಶಾಸಕ ತಿಪ್ಪರಾಜು ಹವಲ್ದಾರ್, ಬಿಜೆಪಿ ಹಿರಿಯ ಮುಖಂಡ ವಿಶ್ವನಾಥ ಬನಹಟ್ಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್