ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಸ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ಪ್ರಕಾಶ ಮಸ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಇಂದರಪಾಷಾ ಚಿಂಚರಕಿ ಅವಿರೋಧವಾಗಿ ಆಯ್ಕೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಸ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ಪ್ರಕಾಶ ಮಸ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಇಂದರಪಾಷಾ ಚಿಂಚರಕಿ ಅವಿರೋಧವಾಗಿ ಆಯ್ಕೆ. ರಾಯಚೂರು,ಜೂ.29- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಅಧ್ಯಕ್ಷತೆಯಲ್ಲಿ ಮಸ್ಕಿಯ ಪತ್ರಿಕಾ ಭವನದಲ್ಲಿ ನೂತನ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಸ್ಕಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಇಂದರಪಾಷಾ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಪಾಷಾ, ಉಪಾಧ್ಯಕ್ಷ ಶಿವಪ್ಪ ಮಡಿವಾಳರ, ಕಾರ್ಯದರ್ಶಿ ಅಜೀಜ ಮಸ್ಕಿ, ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಯ್ಯಸ್ವಾಮಿ, ಹಿರಿಯ ಪತ್ರಕರ್ತರಾದ ವೀರೇಶ ಸೌದ್ರಿ, ಉಮೇಶ್ವರಯ್ಯ, ಮಲ್ಲಿಕಾರ್ಜುನ ಚಿಲ್ಕರಾಗಿ, ಹನುಮೇಶ ಬಳಗಾನೂರ ಇದ್ದರು.