ಅಗ್ನಿಪಥ ಯೋಜನೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ.
ಅಗ್ನಿಪಥ ಯೋಜನೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ. ರಾಯಚೂರು,ಜೂ.27-ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಅಗ್ನಿಪಥ ಯೋಜನೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನಾ ಧರಣಿ ನಡೆಸಿತು. ನಗರದ ಅಂಬೇಡ್ಕರ್ ವೃತ್ತದ ಬಳಿ ಸೇರಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುಧ್ದ ಘೋಷಣೆ ಕೂಗಿ ಅವೈಜ್ಞಾನಿಕ ಯೋಜನೆ ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ, ಏಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಗ್ರಾಮೀಣ ಶಾಸಕ ದದ್ದಲ ಬಸನಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಸಂತ ಕುಮಾರ ಇತರರು ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರಕಾರದ ಜನ ವಿರೋಧಿ ನಡೆ ಖಂಡಿಸಿದರು. ಯುವಕರ ಭವಿಷ್ಯಕ್ಕೆ ಅಗ್ನಿಪಥ ಯೋಜನೆ ಮಾರಕವಾಗಲಿದ್ದು ಇದೋಂದು ಕೆಟ್ಟ ಯೋಜನೆಯಾಗಿದ್ದು ಇದರಿಂದ ದೇಶದ ಯುವಕರಲ್ಲಿ ನಿರುದ್ಯೋಗ ಸಮಸ್ಯೆ ಬಿಗಡಾಯಿಸಲಿದೆ ಎಂದು ಟೀಕೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಅಸ್ಲಂ ಪಾಶಾ, ಅಬ್ದುಲ್ ಕರೀಮ್, ಜಯಣ್ಣ, ನರಸಿಂಹಲು ಮಾಡಗಿರಿ,ಸಾಜೀದ ಸಮೀರ,ಕಡಗೋಲ ಶರಣಪ್ಪ, ಅಮರೇಗೌಡ ಹಂಚಿನಾಳ,ಶಶಿಕಲಾ ಭೀಮರಾಯ ಸೇರಿದಂತೆ ಮಹಿಳಾ ಕಾಂಗ್ರೆಸ್ ಮುಖಂಡರು, ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿದ್ದರು.
Comments
Post a Comment