ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ರಾಯಚೂರು,ಜು.೨೨-ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಇಡಿ ವಿಚಾರಣೆಗೊಳಪಡಿಸಿದ್ದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಬೆಳಿಗ್ಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಮಾತನಾಡಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಲೆಕ್ಕ ಪತ್ರ ಕುರಿತು ವಿನಾಕಾರಣ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ವಿಚಾರಣೆಗೊಳಪಡಿಸಿದ್ದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದ ಅವರು ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ಇಷ್ಟಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಅರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಮಾತನಾಡಿ ಕಾಂಗ್ರೆಸ್ ಕೊಡುಗೆಯನ್ನು ಬಿಜೆಪಿ ಸಹಿಸುತ್ತಿಲ್ಲ ದೇಶಕ್ಕೆ ಸ್ವಾತಂತ್ರö್ಯ ಬಂದ ನಂತರ ಭಾರತದಲ್ಲಿ ಬದಲಾವಣೆ ತರುವಲ್ಲಿ ಕಾಂಗ್ರೆಸ್ ನಾಯಕರ ಕೊಡುಗೆ ಅನನ್ಯವಾಗಿದ್ದು ಕಾಂಗ್ರೆಸ್ ಪಕ್ಷದ ಬಲ ಕುಂದಿಸಲು ಬಿಜೆಪಿ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿನಾಕಾರಣ ವಿಚಾರಣೆ ನೆಪದಲ್ಲಿ ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದರು.
ಗ್ರಾಮೀಣ ಶಾಸಕ ಬಸನಗೌಡ ದದ್ದಲ ಮಾತನಾಡಿ ಕೇಂದ್ರ ಸರ್ಕಾರ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದು ಇದನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದರಿಸುತ್ತದೆ ಎಂದರು.
ಶಾಸಕರಾದ ಬಸನಗೌಡ ತುರವಿಹಾಳ, ಮಾಜಿ ಶಾಸಕರಾದ ಬಾದರ್ಲಿ ಹಂಪನಗೌಡ, ಹಂಪಯ್ಯ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ರೆಡ್ಡಿ, ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ,ಜಿ.ಶಿವಮೂರ್ತಿ, ಅಬ್ದುಲ್ ಕರೀಮ್,ನರಸಿಂಹಲು ಮಾಡಗಿರಿ, ಮಹಮ್ಮದ ಶಾಲಂ, ಶ್ರೀನಿವಾಸ ರೆಡ್ಡಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ,ಸುಧೀAದ್ರ ಜಾಗೀರದಾರ್, ಜಿಂದಪ್ಪ, ಕಿಶನರಾವ್ ಎಲ್.ಕೆ.ದೊಡ್ಡಿ, ಮಲ್ಲೇಶ ಕೊಲಮಿ, ಪ್ರಸನ್ನ ಆ¯ಂಪಲ್ಲಿ, ಮಹಿಳಾ ಕಾಂಗ್ರೆಸ್ ಮುಖಂಡರಾದ ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ, ಮಂಜುಳಾ, ರಾಣಿ ರಿಚರ್ಡ, ವಂದನಾ ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.
Comments
Post a Comment