ಮಂತ್ರಾಲಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ.
ಮಂತ್ರಾಲಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ. ರಾಯಚೂರು,ಆ.27- ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಬೃಂದಾವನ ದರ್ಶನ ಪಡೆದರು. ಶ್ರೀಮಠದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.
ಮಂಚಾಲಮ್ಮ ದೇವಿ ದರ್ಶನ ಪಡೆದ ಅವರು ರಾಯರ ಬೃಂದಾವನ ದರ್ಶನ ಪಡೆದುಕೊಂಡು ನಂತರ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶಶಿರಾಜ ಮಸ್ಕಿ, ಗಿರೀಶ ಕನಕವೀಡು, ನರಸಪ್ಪ ಯಕ್ಲಾಸಪೂರು, ಶಿವಕುಮಾರ ಪೊಲೀಸ್ ಪಾಟೀಲ ಇತರರು ಇದ್ದರು.
Comments
Post a Comment