ನಗರಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿದ ಸಿಎಂ.
ನಗರಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿದ ಸಿಎಂ. ರಾಯಚೂರು,ಆ.27-ನಗರದಲ್ಲಿ ನಡೆಯುತ್ತಿರುವ ಸಿರಿಧಾನ್ಯ ಮೇಳ ಉದ್ಘಾಟಿಸಲು ಸಿಎಂ ಬಸವರಾಜ ಬೊಮ್ಮಾಯಿ ನಗರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದರು. ನಂತರ ಸ್ಥಳದಲ್ಲಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಬದ್ಧವಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕರಾದ ಕೆ.ಶಿವನಗೌಡ ನಾಯಕ,ಡಾ.ಶಿವರಾಜ ಪಾಟೀಲ, ರಾಜುಗೌಡ ,ಮಾಜಿ ಶಾಸಕರಾದ ತಿಪ್ಪರಾಜು ಹವಾಲ್ದಾರ್, ಮಾನಪ್ಪ ವಜ್ಜಲ್ ಸೇರಿದಂತೆ ಅನೇಕರಿದ್ದರು. ವಿವಿಧ ಸಂಘ ಸಂಸ್ಥೆಗಳ ಮುಖಂಡರು , ಹೋರಾಟಗಾರರು ಮನವಿ ಪತ್ರ ಸಲ್ಲಿಸಿದರು. ಭಾರಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
Comments
Post a Comment