ಸೆ.೧೮ ರಂದು ನೇಕಾರರ ಸಮಾವೇಶ, ಪ್ರತಿಭಾ ಪುರಸ್ಕಾರ , ಸನ್ಮಾನ ಸಮಾರಂಭ


ಸೆ.೧೮ ರಂದು ನೇಕಾರರ ಸಮಾವೇಶ, ಪ್ರತಿಭಾ ಪುರಸ್ಕಾರ , ಸನ್ಮಾನ ಸಮಾರಂಭ

ರಾಯಚೂರು, ಸೆ.೧೭- ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದಿಂದ ಸೆ.೧೮ ರಂದು ಬೆಳಿಗ್ಗೆ ೧೦:೩೦ ನಿ.ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನೇಕಾರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಮಾಜದಲ್ಲಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಬೆಳಿಗ್ಗೆ ೯:೩೦ ನಿಕ್ಕೆ ನಗರದ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದಿಂದ ರಂಗಮAದಿರದ ವರೆಗೆ ವಿವಿಧ ಕಲಾತಂಡಗಳ ಮೂಲಕ ಭವ್ಯ ಮೆರವಣಿಗೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮವನ್ನು ಜವಳಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಧ್ಯಕ್ಷ ಬಿ.ಎಸ್ ಸೋಮಶೇಖರ್ ಅವರು ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ರಾಜಾ ಅಮರೇಶ್ವರ ನಾಯಕ್, ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಎಸ್. ಕೇಶವ್ ಪ್ರಸಾದ್, ಶಾಸಕ ಡಾ. ಶಿವರಾಜ ಪಾಟೀಲ್, ಎನ್.ಎಸ್ ಭೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಶಿವನಗೌಡ ನಾಯಕ್, ರಾಜಾ ವೆಂಕಟಪ್ಪ ನಾಯಕ್ , ವೆಂಕಟರಾವ್ ನಾಡಗೌಡ, ಡಿ.ಎಸ್. ಹೂಲಗೇರಿ, ನಗರಸಭೆ ಅಧ್ಯಕ್ಷೆ ಲಲಿತಾ ಆಂಜಿನೇಯ್ಯ ಕಡಗೋಳ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಂಸzರು ಹಾಗೂ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಗೌರವಾಧ್ಯಕ್ಷರಾದ ಕೆ. ಸಿ. ಕೊಂಡಯ್ಯ, ಮಾಜಿ ಶಾಸಕರು, ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ಎಂ.ಡಿ. ಲಕ್ಷಿö್ಮÃನಾರಾಯಣ ಹಾಗೂ ಮಾಜಿ ಸಚಿವರಾದ ಉಮಾಶ್ರೀ , ಮಲ್ಲಿಕಾರ್ಜುನ ನಾಗಪ್ಪ ಹಾಗೂ ಚಲನಚಿತ್ರ ಸಾಹಿತಿಗಳು, ಹಾಗೂ ಕಲಾ ನೇಕಾರ ಅಧ್ಯಕ್ಷರಾದ ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಉಪಸ್ಥಿತರಿರುವರು.



ಅಥಿತಿಗಳಾಗಿ ಮಾಜಿ ಶಾಸಕ ಎ. ಪಾಪಾರೆಡ್ಡಿ, ಕೆ. ಶಾಂತಪ್ಪ, ಸೇರಿದಂತೆ ರಾಜ್ಯ, ಜಿಲ್ಲೆ ಹಾಗೂ ವಿವಿಧ ತಾಲೂಕುಗಳ ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ . ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಐðಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧ್ಯಕ್ಷ ಜಿ. ನಾಗರಾಜು ಮಾಣವಿ, ಹಾಗೂ ರಾಯಚೂರು ತಾಲೂಕು ಅಧ್ಯಕ್ಷ ದೊಡ್ಡ ಈರಣ್ಣ ಕರ್ಲಿ ಅವರು ಮನವಿ ಮಾಡಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್