ಸಿರವಾರ: ಪತ್ರಿಕಾ ದಿನಾಚರಣೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಸಿರವಾರ: ಪತ್ರಿಕಾ ದಿನಾಚರಣೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರಾಯಚೂರು, ಸೆ.11- ಸಿರವಾರ ತಾಲ್ಲೂಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಉದ್ಘಾಟಿಸಿದರು.
ಹಿರಿಯ ಪತ್ರಕರ್ತ ಸುರೇಂದ್ರಾಚಾರ್ಯ ಕೊರ್ತಕುಂದಾ ಉಪನ್ಯಾಸ ನೀಡಿದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಂಪಯ್ಯ ನಾಯಕ, ತಹಸೀಲ್ದಾರ ಹುಲಿನಾಯಕ, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಪಾಷಾ ಹಟ್ಟಿ, ಜಿಲ್ಲಾ ಉಪಾಧ್ಯಕ್ಷ ಪಿ.ಪರಮೇಶ, ಜಿಲ್ಲಾ ಕಾರ್ಯದರ್ಶಿ ಸೂಗೂರೇಶ್ವರ ಗುಡಿ, ತಾಲ್ಲೂಕ ಅಧ್ಯಕ್ಷ ಎಂ.ಗುಂಡಪ್ಪ, ಪ್ರಧಾನ ಕಾರ್ಯದರ್ಶಿ ವಿರೇಶ ಹರಕಂಚಿ, ಕಾಂಗ್ರೆಸ್ ಮುಖಂಡ ಚುಕ್ಕಿ ಸೂಗಪ್ಪ ಸಾಹುಕಾರ, ದೇವರಾಜಗೌಡ, ಶಿವಶರಣ ಪಾಟೀಲ್ ಲಕ್ಕಂದಿನ್ನಿ, ಎನ್.ಉದಯಕುಮಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.


Comments
Post a Comment