ಅ.೧೫ರಂದು ಅರಕೇರಾ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ - ಅಪರ ಜಿಲ್ಲಾಧಿಕಾರಿ ದುರುಗೇಶ


 ಅ.೧೫ ರಂದು ಅರಕೇರಾ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ - ಅಪರ ಜಿಲ್ಲಾಧಿಕಾರಿ ದುರುಗೇಶ

ರಾಯಚೂರು ಸೆ.೨೧- ಜಿಲ್ಲೆಯ ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಇದೇ ಅಕ್ಟೋಬರ್ ೧೫ ರಂದು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಹೂಡಲಿದ್ದು, ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.     

 ಅವರು ಸೆ.೨೧ರ ಬುಧವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅ.೧೫ರಂದು ಜಿಲ್ಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಮಾತನಾಡಿದರು. 

ಮುಂದಿನ ತಿಂಗಳ ಮೂರನೇ ಶನಿವಾರ (ಅಕ್ಟೋಬರ್-೧೫)ರಂದು ಅರಕೇರಾ ಗ್ರಾಮದಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೫ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ಅರಕೇರಾ ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿನ ಸಮಸ್ಯೆ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.   

ಅಂದು ಅರಕೇರಾ ಗ್ರಾಮದಲ್ಲಿ ಸಚಿವರ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ತಮ್ಮ ಯೋಜನೆಗಳ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಿ ಸಾರ್ವಜನಿಕರಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ ೯ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು.  ಆಧಾರ್ ಕಾರ್ಡ್ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ತಿಳಿಹೇಳಿದರು.


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ