ವಿಶ್ವ ಓಜೋನ್ ದಿನಾಚರಣೆ

 


ವಿಶ್ವ ಓಜೋನ್ ದಿನಾಚರಣೆ

ರಾಯಚೂರು, ಸೆ. ೨೧: ಇತ್ತೀಚೆಗೆ ನಗರದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಮೋರರ‍್ಜಿ ದೇಸಾಯಿ ವಸತಿ ಶಾಲೆಯಲ್ಲಿ ರ‍್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಪ್ರಾದೇಶಿಕ ಕಚೇರಿ), ಗ್ರೀನ್ ರಾಯಚೂರು ಹಾಗೂ ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಓಜೋನ್ ದಿನಾಚರಣೆಯನ್ನು ಆಚರಿಸಲಾಯಿತು. 


ಶಾಲೆಯ ಪರಿಸರದಲ್ಲಿ ೩೫ ಸಸಿಗಳನ್ನು ನೆಡುವ ಮೂಲಕ ಕಾರ‍್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಪರಿಸರ ಅಧಿಕಾರಿ ಗೀರಿಶ್ ಅವರು ಓಜೋನ್ ಪದರದ ರಕ್ಷಣೆ ಹಾಗೂ ಪರಿಸರ ಜಾಗೃತಿ ಕುರಿತು ಶಾಲೆಯ ಶಿಕ್ಷಕರು ಮತ್ತು ವಿದ್ಯರ‍್ಥಿಗಳಿಗೆ ಉಪನ್ಯಾಸ ನೀಡಿದರು. ನಂತರ ವಿದ್ಯರ‍್ಥಿಗಳಿಗೆ ಪರಿಸರ ಸಂರಕ್ಷಣೆ ವಿಷಯದ ಕುರಿತು ಭಾಷಣ ಮತ್ತು ಚಿತ್ರಕಲೆ ಸ್ರ‍್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. 


ಕಾರ‍್ಯಕ್ರಮದಲ್ಲಿ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷ ಮಲ್ಲಿಕಾರ‍್ಜುನ್, ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷೆ ಕಿಲ್ಕಿಲೆ ಸರಸ್ವತಿ, ರಾಜೇಂದ್ರ ಕುಮಾರ್ ಶಿವಾಳೆ, ಮಾಲಿನ್ಯ ನಿಯಂತ್ರಣ ಮಂಡಳಿಯ ವೈಜ್ಞಾನಿಕ ಸಹಾಯಕ ರಾಜಾ.ಹೆಚ್ ಸೇರಿದಂತೆ ಲಯನ್ಸ್ ಕ್ಲಬ್, ಶಿಲ್ಪಾ ಫೌಂಡೇಶನ್ ಹಾಗೂ ರ‍್ಯಾವರಣ ಸಂರಕ್ಷಣ ಗತಿವಿಧಿಯ ಪದಾಧಿಕಾರಿಗಳು ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ