ನವದೆಹಲಿಯಲ್ಲಿ ನಡೆದ ಎಐಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅಭಿನಂದಿಸಿದ ಎನ್.ಎಸ್ ಬೋಸರಾಜು
ನವದೆಹಲಿಯಲ್ಲಿ ನಡೆದ ಎಐಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅಭಿನಂದಿಸಿದ ಎನ್.ಎಸ್ ಬೋಸರಾಜು.
ರಾಯಚೂರು,ಅ.27- ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅದ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಕಾರ್ಯದರ್ಶಿ ಗಳಾದ ಎನ್ಎಸ್ ಬೋಸರಾಜು ಅವರು ಅಭಿನಂದನೆ ತಿಳಿಸಿದರು.
ನವದೆಹಲಿಯ ಎಐಸಿಸಿ ಕಾರ‍್ಯಾಲಯದಲ್ಲಿ ನಡೆದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ನೂತನ ಅಧ್ಯಕ್ಷರಾಗಿ ಅಯ್ಕೆಯಾದ ಖರ್ಗೆ ಅವರಿಗೆ ಅಭಿನಂದಿಸಿದರು.
ಅಕ್ಟೋಬರ ೧೭ ರಂದು ನಡೆದ ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ೭ ಸಾವಿರಕ್ಕೂ ಅಧಿಕ ಮತಗಳಿಂದ ಖರ್ಗೆಯವರು ಜಯಶಾಲಿಯಾಗಿದ್ದರು.
Comments
Post a Comment