ಜಿಲ್ಲೆಯ ಇಬ್ಬರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ.
ಜಿಲ್ಲೆಯ ಇಬ್ಬರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ. ರಾಯಚೂರು,ಅ.30- ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು 67ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಒಟ್ಟು 67 ಸಾಧಕರಿಗೆ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ . ರಾಯಚೂರು ಜಿಲ್ಲೆಯ ಇಬ್ಬರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ವಿಜ್ಞಾನ- ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ಡಾ.ಡಿ.ಆರ್.ಬಳ್ಳೂರಗಿ ಹಾಗೂ ಜಾನಪದ ಕ್ಷೇತ್ರದಲ್ಲಿ ಕಮಲಮ್ಮ ರವರಿಗೆ ಪ್ರಶಸ್ತಿ ಒಲಿದು ಬಂದಿದ್ದು ಈರ್ವರಿಗೆ ಜಿಲ್ಲೆಯ ಜನರು ಅಭಿನಂದಿಸಿ ಸಂತಸ ವ್ಯಕ್ತ ಪಡಿಸಿದ್ದು ಜಯಧ್ವಜ ಪತ್ರಿಕೆ ಸಹ ಅಭಿನಂದನೆ ಸಲ್ಲಿಸುತ್ತದೆ .
Comments
Post a Comment