ಶೀಘ್ರವೇ ರೈಲ್ವೇ ನಿಲ್ದಾಣ ಮೇಲ್ದರ್ಜೆಗೆ: ನಗರದ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್ ಉದ್ಘಾಟನೆ
ಶೀಘ್ರವೇ ರೈಲ್ವೇ ನಿಲ್ದಾಣ ಮೇಲ್ದರ್ಜೆಗೆ: ನಗರದ ರೈಲ್ವೇ ನಿಲ್ದಾಣದಲ್ಲಿ ಲಿಫ್ಟ್ ಉದ್ಘಾಟನೆ ರಾಯಚೂರು,ನ.30- ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆದಿದ್ದು ಸದ್ಯ ಲಿಫ್ಟ್ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಹೇಳಿದರು. ಅವರಿಂದು ನಗರದ ರೇಲ್ವೆ ನಿಲ್ದಾಣದಲ್ಲಿ ನೂತನ ಲಿಫ್ಟ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ನಗರದ ರೇಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಈಗಾಗಲೇ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಲಿಫ್ಟ್ ಈ ಮುಂಚೆಯೇ ಉದ್ಘಾಟನೆಗೊಳ್ಳಬೇಕಿತ್ತು ಕರೋನಾ ಸೇರಿದಂತೆ ನಾನಾ ಕಾರಣಗಳಿಂದ ಮುಂದೂಡುತ್ತ ಬರಲಾಗಿತ್ತು ಈಗ ಬಹುದಿನಗಳ ಬೇಡಿಕೆ ಈಡೇರಿದಂತಾಗಿದ್ದು, ವಿಕಲಚೇತನರು, ಅಶಕ್ತರು, ವೃದ್ಧರಿಗೆ ಇದರಿಂದ ಅನುಕೂಲವಾಗಲಿದೆ ಎಂದ ಅವರು ಈ ಹಿಂದೆ ವೃದ್ಧರಿಗೆ ಪ್ಲಾಟ್ ಫಾರಂ ನಲ್ಲಿ ಸಂಚರಿಸಲು ಬ್ಯಾಟರಿ ಚಾಲಿತ ಬಹು ಆಸನಗಳ ಲಘವಾಹನ ವ್ಯವಸ್ಥೆ ಮಾಡಲಾಗಿದ್ದು ಎಲ್ಲರ ಗಮನ ಸೆಳೆದಿದ್ದು ಮಾತ್ರವಲ್ಲದೆ ಅನೇಕರಿಂದ ಪ್ರಶಂಸೆಯ ಮಾತುಗಳು ಕೇಳಿ ಬಂದಿವೆ ಎಂದರು. ರೇಲ್ವೆ ನಿಲ್ದಾಣದ ಮುಖ್ಯದ್ವಾರವನ್ನು 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು. ರೈಲ್ವೆ ...