ನಾಳೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಸಮಾರಂಭ ಹಾಗೂ ಸಂವಿಧಾನ ಓದು ದಿನಾಚರಣೆ.




 ನಾಳೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಸಮಾರಂಭ ಹಾಗೂ ಸಂವಿಧಾನ ಓದು ದಿನಾಚರಣೆ.           ರಾಯಚೂರು,ನ.25- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ  ಸಂಘ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಸಂಯುಕ್ತಾಶ್ರಯದಲ್ಲಿ  ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಸಮಾರಂಭ ಹಾಗೂ ಸಂವಿಧಾನ ಓದು ದಿನಾಚರಣೆ ಹಮ್ಮಿಕೊಳ್ಳಲಾಗಿದೆ.                                  ನ.26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪತ್ರಕರ್ತರು ಹಾಗೂ ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ವಿ.ಮಲ್ಲಿಕಾರ್ಜುನಯ್ಯ ನೆರವೇರಿಸಲಿದ್ದು ಅತಿಥಿಗಳಾಗಿ ಕಲಬುರ್ಗಿಯ ಹಿರಿಯ ಪತ್ರಕರ್ತರಾದ ಟಿ.ವಿ.ಶಿವಾನಂದ, ಜಿಲ್ಲಾಧಿಕಾರಿಗಳಾದ ಎಲ್.ಚಂದ್ರಶೇಖರ ನಾಯಕ, ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವಮೂರ್ತಿ ಹೀರೆಮಠ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ವೀರಾರೆಡ್ಡಿ,ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮುಂತಾದವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಿ ಹಿಂದೂ ಪತ್ರಿಕೆ ನಿವೃತ್ತ ಹಿರಿಯ ವರದಿಗಾರರಾದ ಕಿಶನರಾವ ದಿದ್ದಗಿರವರನ್ನು ಸನ್ಮಾನಿಸಲಾಗುತ್ತಿದ್ದು ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ವಹಿಸಲಿದ್ದು ಪ್ರಾಸ್ತಾವಿಕ ನುಡಿಗಳನ್ನು ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಮಾತನಾಡಲಿದ್ದಾರೆ . ಕಾರ್ಯಕ್ರಮಕ್ಕೆ ಎಲ್ಲ ಪತ್ರಕರ್ತರು ಕುಟುಂಬ ಸಹಿತರಾಗಿ ಆಗಮಿಸುವಂತೆ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವಿಜಯ ಜಾಗಟಗಲ್, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ .ಬಿ.ಸ್ವಾಮಿ ,ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಾಶಾ.ಎಂ.ಹಟ್ಟಿ ಹಾಗೂ   ಮೂರು ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿಕೊಳ್ಳುತ್ತಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್