ನರೇಗಾ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ: ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ- ವೇಣುಗೋಪಾಲ

 


ನರೇಗಾ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ:           ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ- ವೇಣುಗೋಪಾಲ

ರಾಯಚೂರು,ನ.16- ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಟಾನಗೊಳ್ಳುತ್ತಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಯೋಜನೆಯಲ್ಲಿ ಪ್ರಗತಿ ಸಾಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯಚರಣೆ ಅಧಿಕಾರಿ ಪಿ.ಜಿ.ವೇಣುಗೋಪಾಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಅವರು ನ.16ರ(ಬುಧವಾರ) ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವು ಕಾಮಗಾರಿಗಳು ಬಾಕಿ ಇದ್ದು, ಡಿಸೆಂಬರ್ ತಿಂಗಳ ಅಂತ್ಯದೊಳಗಾಗಿ ನರೇಗಾ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗರಿಷ್ಠ ಗುರಿ ತಲುಪಿ ಪ್ರಗತಿ ಸಾಧಿಸುವಂತೆ ಸೂಚಿಸಿದರು.



2019-20ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 1,60,498 ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲಾಗಿದ್ದು, ಇದರಲ್ಲಿ 1,60,476 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ 22 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೇ.99.99 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು, ಕೂಡಲೇ ಬಾಕಿ ಕಾಮಗಾರಿಗಳನ್ನು ಮೊದಲು ಪೂರ್ಣಗೊಳಿಸಿ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ತಿಳಿಸಿದರು.


2021-22ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ನರೆಗಾದಡಿ ಕೈಗೊಂಡಿರುವ ಕಾಮಗಾರಿಗಳ ಪೈಕಿ ಶೇ.54.72 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆಯಾ ಪಂಚಾಯತಿ ವ್ಯಾಪ್ತಿಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು. 



2022-23ನೇ ಸಾಲಿನಲ್ಲಿ ಕೈಗೊಂಡಿರುವ ನರೇಗಾ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಸಬೇಕು ಜೊತೆಗೆ 2019ರಿಂದ ಬಾಕಿ ಇದ್ದ ಕಾಮಗಾರಿಗಳನ್ನೂ ಪೂರ್ಣಗೊಳಿಲು ಶ್ರಮಿಸಬೇಕು ನರೇಗಾ ಕೂಲಿ ಕಾರ್ಮಿಕರಿಗೆ ವೇತನ ಪಾವತಿ ಮಾಡುವ ವಿಚಾರದಲ್ಲಿ ವಿಳಂಬವಾಗಬಾರದು. ನಿಗದಿತ ಸಮಯದೊಳಗೆ ವೇತನ ಪಾವತಿಯಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. 


ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗಾಗುವ ವೆಚ್ಚದ ಕುರಿತು ಎಲ್ಲಾ ರೀತಿಯ ಪರಿಶೀಲನೆ ಮಾಡಿ ಕ್ರಿಯಾ ಯೋಜನೆ ರೂಪಿಸಬೇಕು ಎಂದರು.


ಈ ಸಂದರ್ಭದಲ್ಲಿ ಇಲಾಖೆಯ ತಾಂತ್ರಿಕ ಸಹಾಯಕ ನಿರ್ದೇಶಕ ಶಿವಾನಂದ, ಯುವ ವೃತ್ತಿಪರ (ಜೀವನೋಪಾಯ ಮತ್ತು ಎನ್‌ಆರ್‌ಎಂ) ವಿನಾಯಕ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಸೇರಿದಂತೆ ವಿವಿಧ ತಾಲೂಕು ಪಂಚಾಯತ್ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ