ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ) ಸಭೆ: ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ- ರಾಜಾ ಅಮರೇಶ್ವರ ನಾಯಕ
ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ) ಸಭೆ:
ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ- ರಾಜಾ ಅಮರೇಶ್ವರ ನಾಯಕ
ರಾಯಚೂರು,ನ.೩೦- ಕೇಂದ್ರದ ಪುರಸ್ಕೃತ ಯೋಜನೆಯಡಿ ಜನಸಾಮಾನ್ಯಮರಿಗೆ ದೊರೆಯುವಂತಹ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಒದಗಿಸಿ ಹಾಗೂ ಜನಸಾಮಾನ್ಯರಿಗೆ ಯೋಜನೆಗಳ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರೂ ಹಾಗೂ ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಸಮರ್ಪಕವಾದ ಮಾಹಿಒತಿಯ ಅವಶ್ಯಕತೆಯಿದ್ದು, ಜನರಿಗೆ ಸೂಕ್ತ ಮಾಹಿತಿ ಒದಗಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯನ್ನು ಎಲ್ಲಾ ಗ್ರಾಮೀಣ ಭಾಗಗಳಲ್ಲಿ ಅನುಷ್ಟಾನಗೊಳಿಸಿ ನೀರಿನ ಸಮಸ್ಯೆಯಾಗದಂತೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ಶೇ.೧೦೦ರಷ್ಟು ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.
ರಾಷ್ಟಿçÃಯ ಹೆದ್ದಾರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ರಾಷ್ಟಿçÃಯ ಹೆದ್ದಾರಿ ನಿರ್ಮಾಣದಿಂದ ಯಾವುದೇ ರೈತರಿಗೆ ಜಮೀನು ಮಾಲಿಕರಿಗೆ ತೊಂದರೆಯಾಗದAತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಹೆದ್ದಾರಿ ನಿರ್ಮಾಣಕ್ಕಾಗಿ ಜಮೀನು ಮಾಲಿಕರಿಂದ ಭೂ ಸ್ವಾಧೀನಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದಿಂದ ಪುರಸ್ಕೃತಗೊಂಡಿರುವ ನೀರಾವರಿ ಯೋಜನೆಗಳು, ಕೃಷಿ ಯೋಜನೆಗಳು, ಹಾಗೂ ಇನ್ನಿತರ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸಿ ಯೋಜನೆಗಳನ್ನು ಅನುಷ್ಟಾನಗೊಳಿಸುವಂತೆ ತಿಳಿಸಿದರು.
ಕೇಂದ್ರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟಿçÃಯ ಕೃಷಿ ವಿಕಾಸ ಯೋಜನೆ, ಪರಂಪರಾಗತ ಕೃಷಿ ವಿಕಾಸ ಯೋಜನೆ, ಮಣ್ಣು ಆರೋಗ್ಯ ಚೀಟಿ ಹಾಗೂ ಮುಖ್ಯವಾಗಿ ಫಸಲ್ ಭಿಮಾ ಯೋಜನೆಯ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ತಲುಪಿಸಬೇಕು ಎಂದರು.
ಇದೇ ವೇಳೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆ, ರಾಷ್ಟಿçÃಯ ಕೃಷಿ ವಿಕಾಸ ಯೋಜನೆ ಹಾಗೂ ಪರಂಪರಾಗತ ಕೃಷಿ ವಿಕಾಸ ಯೋಜನೆಯ ಕುರಿತು ಮಾಹಿತಿಯ ಕೊರತೆಯಿದ್ದು, ಅಧಿಕಾರಿಗಳು ನಿರ್ಲಕ್ಷö್ಯ ವಹಿಸದೇ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಶಾಸಕ ಡಾ.ಶಿವರಾಜ್ ಪಾಟೀಲ್ ಮಾತನಾಡಿ, ನಗರ ಹಾಗೂ ರಾಯಚೂರು ತಾಲೂಕಿನ ಹಲವೆಡೆ ರಸ್ತೆಗಳು ಹದಗೆಟ್ಟು ಹೋಗಿದ್ದು, ಇಲಾಖೆಯಿಂದ ಯಾವುದೇ ರಸ್ತೆ ಕಾಮಗಾರಿಗಳು ನಡೆಯುತ್ತಿಲ್ಲ ಜೊತೆಗೆ ನಗರದ ವಿವಿಧೆಡೆ ಕಾನೂನು ತೊಡೆಕಿನ ನೆಪದಲ್ಲಿ ರಸ್ತೆ ಕಾಮಗಾರಿಗಳನ್ನು ಮಾಡದೇ ಅಧಿಕಾರಿಗಳು ನಿರ್ಲಕ್ಷö್ಯವಹಿಸುತ್ತಿದ್ದು, ಕೂಡಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆ ಕಾಮಗಾರಿಗೆ ಅಡ್ಡಿಯಾದ ಸಮಸ್ಯೆಗಳನ್ನು ಪರಿಹರಿಸಿಕೊಂಡು ರಸ್ತೆ ನಿರ್ಮಾಣಕ್ಕೆ ಮುಂದಾಗುವ0ತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಪರ್ಣಾ, ಸೇರಿದಂತೆ ಸಭೆಯ ನಾಮನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Comments
Post a Comment