ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ೭೪ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳ ಜಾರಿ -ಸಚಿವ ಶಂಕರಪಾಟೀಲ್ ಮುನೇನಕೊಪ್ಪ

 


ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ೭೪ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟç ಧ್ವಜಾರೋಹಣ:

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳ ಜಾರಿ -ಸಚಿವ ಶಂಕರಪಾಟೀಲ್ ಮುನೇನಕೊಪ್ಪ

ರಾಯಚೂರು,ಜ.೨೬- ನಗರದ ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ೭೪ನೇ ಗಣರಾಜ್ಯೋತ್ಸವ ದಿನಾಚರಣೆಯಂಗವಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬ. ಪಾಟೀಲ್ ಮುನೇನಕೊಪ್ಪ ಅವರು ಧ್ವಜಾರೋಹಣ ನೆರವೇರಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಸಂದೇಶ ನೀಡಿದರು. 

೧೯೪೭ರ ಆಗಸ್ಟ್ ೧೫ ರಂದು ದೇಶವು ಸ್ವಾತಂತ್ರö್ಯ ಪಡೆದು ೩೦೦ ವರ್ಷಗಳಿಂದ ಅನುಭವಿಸುತ್ತಿದ್ದ ದಾಸ್ಯದ ಸಂಕೋಲೆಯನ್ನು ಕಳಚಿಕೊಂಡಿತು. ಆ ನಂತರ ೧೯೫೦ ಜನವರಿ ೨೬ ರಂದು ಸಂವಿಧಾನವನ್ನು ಅಧಿಕೃತವಾಗಿ ಜಾರಿಗೊಳಿಸಲಾಯಿತು. ಇಡೀ ವಿಶ್ವದಲ್ಲಿ ಭಾರತ ಕೂಡಾ ಒಂದು ಸಾರ್ವಭೌಮ ರಾಷ್ಟçವಾಯಿತು. ಇದರ ನೆನಪಿಗೆ ಗಣರಾಜ್ಯೋತ್ಸವವನ್ನು ಆಚರಿಸುತ್ತಾ ಬಂದಿದ್ದೇವೆ ಎಂದರು.


ರಾಷ್ಟçಪಿತ ಮಹಾತ್ಮಗಾಂಧಿ, ಜವಹಾರ್ ಲಾಲ್ ನೆಹರೂ, ಸರ್ದಾರ್ ವಲ್ಲಭಬಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತಿç ಹಾಗೂ ನೇತಾಜಿ ಸುಭಾಶ್‌ಚಂದ್ರ ಭೋಸ್ ಅವರಂತಹ ಮಹಾನ್ ನಾಯಕರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದಿರುವ ಸ್ವಾತಂತ್ರö್ಯವು ಶಾಂತಿ ಹಾಗೂ ಅಹಿಂಸೆಯಿAದ ಪ್ರೇರಿತಗೊಂಡಿದೆ.

ಸAವಿಧಾನ ಕರಡು ಸಮಿತಿಯಲ್ಲಿ ಮತ್ತು ರಚನಾ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ವಿಶೇಷವಾಗಿತ್ತು. ಹಲವಾರು ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿದ್ದ ಅನುಭವದ ನೆರವಿನಿಂದಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ಸಂವಿಧಾನಕ್ಕೆ ನೀಡಿದ ಕೊಡುಗೆಯಿಂದಾಗಿ ಅವರನ್ನು ‘ಸಂವಿಧಾನದ ಪಿತಾಮಹ’ ಎಂದು ನಾವು ಸ್ಮರಿಸುತ್ತೇವೆ ಎಂದರು.


ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ.


೨೦೨೦-೨೧ ನೇ ಸಾಲಿನಲ್ಲಿ ಐ.ಐ.ಐ.ಟಿ (ಟ್ರಿಪ್ಪಲ್ ಐಟಿ) ಕಾಲೇಜಿನ ತರಬೇತಿಗಳನ್ನು ಪ್ರಾರಂಭಿಸಲು ತಾತ್ಕಾಲಿಕವಾಗಿ ರಾಯಚೂರು ನಗರದ ಸರ್ಕಾರಿ ಇಂಜನೀಯರಿAಗ್ ಕಾಲೇಜಿನಲ್ಲಿ ನಡೆಸಲು ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಪ್ರಸ್ತುತ ತರಗತಿಗಳು ಪ್ರಾರಂಭವಾಗಿರುತ್ತವೆ. ಇದಕ್ಕಾಗಿ ಒಟ್ಟು ೭.೪೬ ಕೋಟಿ ಅನುಧಾನವನ್ನು ಕೆ.ಕೆ.ಆರ್.ಡಿ.ಬಿಯ ಅನುದಾನವನ್ನು ಬಳಸಿಕೊಳ್ಳಲಾಗಿದೆ. ಈಗಾಗಲೇ ಇಲ್ಲಿ ತರಗತಿಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಟ್ರಿಪ್ಪಲ್ ಐಟಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.


ಈ ಜಿಲ್ಲೆಯ ಜನತೆಯ ಬಹುದಿನಗಳ ಕನಸಾದ ರಾಯಚೂರು ವಿಮಾನ ನಿಲ್ದಾಣವು  ಈಗ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಯರಮರಸ್ ಹೊರವಲಯದಲ್ಲಿ ೪೦೪ ಎಕರೆ ಭೂಮಿಯನ್ನು ಇದಕ್ಕಾಗಿ ಕಾಯ್ದಿರಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ೧೦೪ ಕೋಟಿ ರೂಪಾಯಿ ಅನುದಾನ ಮತ್ತು ಡಿಎಂಎಫ್ ಅಡಿಯಲ್ಲಿ ೧೦ ಕೋಟಿ ರೂ.ಗಳೂ ಸೇರಿದಂತೆ ಒಟ್ಟು ೧೧೪ ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ. ಇದಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನಿಡಲಾಗಿರುತ್ತದೆ  ಎಂದರು.



ಜಿಲ್ಲೆಯಲ್ಲಿ ನಗು-ಮಗು ೭ ವಾಹನಗಳಿದ್ದು ಈ ಸಾಲಿನಲ್ಲಿ ೭,೬೯೭ ಫಲಾನುಭವಿಗಳು ಇದರ ಲಾಭ ಪಡೆದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿರುವ ಎಲ್ಲ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆ ಒದಗಿಸಲು ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಎಂಬ ಕ್ರಾಂತಿಕಾರಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೊಳಿಸಿದೆ. ಕೋವಿಡ್ ಲಸಿಕೆಯನ್ನು ಜಿಲ್ಲೆಯಲ್ಲಿ ಈಗಾಗಲೇ ೧೫,೩೫,೧೨೯ ಮೊದಲನೆ ಡೋಸ್ & ೧೫,೪೬,೭೮೮ ಎರಡನೆ ಡೋಸ್ ಹಾಗೂ ಪ್ರಿಕಾಷ್ನರಿ ಡೋಸ್  ೨,೮೫,೫೫೮  ಲಸಿಕೆ ಫಲಾನುಭವಿಗಳ ಮನೆ ಮನೆ ಹೋಗಿ ಉಚಿತವಾಗಿ ನೀಡಲಾಗಿದೆ.


ಜಿಲ್ಲೆಯಲ್ಲಿ ಒಟ್ಟು ೨,೯೯,೨೧೪ ರೈತರಿದ್ದು, ಕೃಷಿ ಇಲಾಖೆಯಲ್ಲಿ ಯಾವುದೇ ಸೌಲಭ್ಯವನ್ನು ಪಡೆಯಲು ರೈತರು ಫ್ರೂಟ್ಸ್ (ಈಡಿuiಣs)  ತಂತ್ರಾಶದಲ್ಲಿ ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಇಲ್ಲಿಯವರೆಗೆ, ೨,೮೫,೦೫೧ ಶೇ.೯೫.೨೬% ರಷ್ಟು ರೈತರು ನೊಂದಾಯಿಸಿಕೊAಡಿರುತ್ತಾರೆ ಎಂದರು.


ಪ್ರಧಾನ ಮಂತ್ರಿಗಳ ಕಿಸಾನ ಸಮ್ಮಾನ ನಿಧಿ ಯೋಜನೆಯಡಿ ಜಿಲ್ಲೆಯ ರೈತರಿಗೆ ಕೇಂದ್ರ ಸರ್ಕಾರದಿಂದ ೪೦೬.೧೨ ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ೧೯೨.೬೫ ಕೋಟಿ ಒಟ್ಟಾರೆ ೫೯೮.೭೭ ಕೋಟಿ ರೂ.ಗಳು, ೨,೨೦,೧೦೬ ಫಲಾನುಭವಿಗಳ ಖಾತೆಗೆ ನೇರವಾಗಿ ವಿವಿಧ ಕಂತುಗಳಲ್ಲಿ ಜಮೆಯಾಗಿರುತ್ತದೆ. 


ಮುಖ್ಯ ಮಂತ್ರಿ “ರೈತ ವಿದ್ಯಾನಿಧಿü” ಯೋಜನೆಯಲ್ಲಿ ಇದುವರೆಗೆ ೪೨,೮೪೭ ವಿದ್ಯಾರ್ಥಿಗಳ ಖಾತೆಗೆ ೧೭.೧೭ ಕೋಟಿ ರೂ.ಗಳ ವಿದ್ಯಾರ್ಥಿ ವೇತನವನ್ನು ಜಮೆ ಮಾಡಲಾಗಿರುತ್ತದೆ.


೨೦೨೨-೨೩ನೇ ಸಾಲಿನ ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ೧೦೫ ಲಕ್ಷ ಮಾನವ ದಿನಗಳ ಗುರಿಗೆ ಅನುಸಾರವಾಗಿ ೯೮ ಲಕ್ಷ ಮಾನವ ದಿನಗಳನ್ನು ಸೃಷ್ಠಿಸಿ ೨೬,೨೬೦.೩೬ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದರು. 


ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಪ್ರಸ್ತಕ ಸಾಲಿನಲ್ಲ್ಲಿ ರಾಜ್ಯದಲ್ಲಿ ಜಿಲ್ಲೆಯು ಮೊದಲನೇ ಸ್ಥಾನದಲ್ಲಿದೆ.  

೨೦೨೨-೨೩ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಒಟ್ಟು ೪,೧೪,೦೪೭ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದಾಖಲಾತಿ ಹೆಚ್ಚಳಕ್ಕಾಗಿ ಹಾಗೂ ಮಕ್ಕಳನ್ನು ಶಾಲೆಗೆ ಆಕರ್ಷಿಸಲು ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಉಚಿತ ಪಠ್ಯ ಪುಸ್ತಕ, ಉಚಿತ ಬೈಸಿಕಲ್, ಉಚಿತ ಸಮವಸ್ತç, ಉಚಿತ ಶ್ಯೂ ಮತ್ತು ಸಾಕ್ಸ್ ಪ್ರೋತ್ಸಾಹದಾಯಕ ಯೋಜನೆಗಳ ಮೂಲಕ ಮಕ್ಕಳ ದಾಖಲಾತಿ ಹೆಚ್ಚಿಸಲಾಗಿದೆ ಎಂದರು.


೨೦೨೨-೨೩ನೇ ಸಾಲಿಗೆ ಒಟ್ಟು ೨೨,೦೬,೦೫೫   ಉಚಿತ ಪಠ್ಯ ಪುಸ್ತಕ ಬೇಡಿಕೆ ಇದ್ದು ಎಲ್ಲಾ ಮಕ್ಕಳಿಗೆ ಪಠ್ಯ ಪುಸ್ತಕ  ವಿತರಿಸುವ ಮೂಲಕ ಶೇ.೧೦೦% ಪ್ರಗತಿ ಸಾಧಿಸಲಾಗಿದೆ.  ೨೦೨೨-೨೩ನೇ ಸಾಲಿನಲ್ಲಿ ಒಟ್ಟು ೨,೫೮,೭೫೪ ಉಚಿತ ಸಮವಸ್ತçಗಳು ಸರಬರಾಜು ಆಗಿದ್ದು, ಅದರಂತೆ ಎಲ್ಲಾ ಮಕ್ಕಳಿಗೆ  ಸಮವಸ್ತç ವಿತರಣೆ ಮಾಡಿ ಶೇ.೧೦೦ರಷ್ಟು ಪ್ರಗತಿ ಸಾಧಿಸಲಾಗಿದೆ.

೨೦೨೨-೨೩ನೇ ಸಾಲಿಗೆ ಪ್ರಾಥಮಿಕ ಶಾಲಾ ವಿಭಾಗಕ್ಕೆ ಸಂಬAಧಿಸಿದAತೆ ೨,೧೮೯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಹಾಗೂ ಪ್ರೌಢ ಶಾಲೆಗೆ ಸಂಬAಧಿಸಿದAತೆ ೪೮೪ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ  

೨೦೨೨-೨೩ನೇ ಸಾಲಿಗೆ ೧೫೩ ಶಾಲೆಗಳಿಗೆ ೨೪೦ ಕೊಠಡಿಗಳ ನಿರ್ಮಾಣಕ್ಕಾಗಿ ೩೩ಕೋಟಿ ೯೦.೪೦ ಲಕ್ಷ ರೂ.ಗಳ ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಬೇಕಾಗಿದೆ.


೨೦೨೨ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ೧೧,೧೬೨ ಹೆಕ್ಟರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದ್ದು ಹತ್ತು ಹಂತಗಳಲ್ಲಿ ಸುಮಾರು ೨೦ ಸಾವಿರ ರೈತರಿಗೆ ರೂ.೧೬.೭೬ ಕೋಟಿಗಳನ್ನು ಭೂಮಿ ಪರಿಹಾರ ತಂತ್ರಾAಶದ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿರುತ್ತದೆ. 


ಪ್ರಸಕ್ತ ಸಾಲಿನ ಭಾರಿ ಮಳೆಯಿಂದ ರಾಯಚೂರು ಜಿಲ್ಲೆಯಲ್ಲಿ ಜೀವ ಹಾನಿ, ಜಾನುವಾರು ಜೀವ ಹಾನಿ, ಮನೆಹಾನಿ, ಬೆಳೆಹಾನಿ, ಮೂಲಭೂತ ಸೌಕರ್ಯಗಳ ಹಾನಿ ಮತ್ತು ಇತರೆ ಹಾನಿಯಾದ ಪ್ರಕರಣಗಳಿಗೆ ಇಲ್ಲಿಯವರೆಗೆ ರೂ.೨೪.೩೫ ಕೋಟಿ ಪರಿಹಾರ ಧನ ಬಿಡುಗಡೆ ಮಾಡಲಾಗಿರುತ್ತದೆ ಎಂದರು. 


ಜಿಲ್ಲೆಯಲ್ಲಿ ಒಟ್ಟು ೭೨೭ ನ್ಯಾಯಬೆಲೆ ಅಂಗಡಿಗಳಿರುತ್ತವೆ. ಅದರಲ್ಲಿ ೫೬೬ ಗ್ರಾಮಾಂತರ ನ್ಯಾಯಬೆಲೆ ಅಂಗಡಿಗಳು ಮತ್ತು ೧೬೧ ನಗರ ನ್ಯಾಯಬೆಲೆ ಅಂಗಡಿಗಳಿರುತ್ತವೆ. ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.


ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಜನವರಿ-೨೦೨೩ರ ಮಾಹೆಯ ಅಂತ್ಯದವರೆಗೆ ೫೨,೩೧೨ ಪಡಿತರ ಚೀಟಿಗಳಿಗೆ ೩೫ ಕೆ.ಜಿ.ಯಂತೆ ಒಟ್ಟು ೧೮,೩೦೯.೨೦ ಕ್ವಿಂಟಾಲ್ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತಿದೆ. 



ಗ್ರಾಮ ಒನ್, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯನ್ನು ವರ್ಷ ೨೦೨೦-೨೧ ರ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಅದರಂತೆ ನಮ್ಮ ಜಿಲ್ಲೆಯಲ್ಲಿ ಒಟ್ಟು ೧೨೮ ಗ್ರಾಮ ಪಂಚಾಯತಿಗಳಿAದ ೨೧೦ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಒಟ್ಟು ೮೦ ವಿವಿಧ ಇಲಾಖೆಗಳಿಂದ ೭೫೦ ಕಿಂತಲೂ ಹೆಚ್ಚು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.


ಜಿಲ್ಲೆಗೆ ಅನುಗುಣವಾಗುವಂತೆ, ಇಲ್ಲಿಯವರೆಗೂ ಒಟ್ಟು ಗ್ರಾಮ ಒನ್ ಕೇಂದ್ರ, ಸೇವಾಸಿಂಧು ಮುಖಾಂತರ ೭೩,೫೭೩ ವಹಿವಾಟುಗಳನ್ನು, ಎ.ಬಿ.ಎ.ಆರ್.ಕೆ. ಮುಖಾಂತರ ೨,೫೦೦ ಕಿಂತಲೂ ಹೆಚ್ಚು ನೋಂದಣಿಗಳನ್ನು ಹಾಗೂ ಆಭಾ ೨ ಲಕ್ಷ ಕಿಂತ ಹೆಚ್ಚು ನೋಂದಣಿಗಳನ್ನು ಮಾಡಲಾಗಿದೆ. 


ನಮ್ಮ ಜಿಲ್ಲೆಯಲ್ಲಿ ಕೈಗೊಂಡ ಈ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಾಕಾರಗೊಳಿಸುವಲ್ಲಿ ಇಲ್ಲಿಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸ್ಥಳೀಯ ಮಹಾಜನತೆ ನಮಗೆ ಸರ್ವ ರೀತಿಯಲ್ಲೂ ಸಹಕಾರ ನೀಡಿರುವುದನ್ನು ನಾನು ಅತ್ಯಂತ ಕೃತಜ್ಞತೆಯಿಂದ ಈ ಸಂದರ್ಭದಲ್ಲಿ ಸ್ಮರಿಸಬಯಸುತ್ತೇನೆ ಎಂದರು.



ದೇಶದ ನಾಗರಿಕರಾಗಿ ಭವ್ಯ ಪರಂಪರೆ, ಸಂಸ್ಕೃತಿ ಇವುಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗುವತ್ತ ನಾವೆಲ್ಲರೂ ಯೋಚಿಸಬೇಕಾಗಿದೆ.  ಜಾತಿ, ಭಾಷೆ, ಪಂಗಡಗಳ ಸಂಕುಚಿತ ಭಾವನೆಯಿಂದ ಹೊರಬಂದು ಸ್ನೇಹ ಹಾಗೂ ಸೌಹಾರ್ದತೆಯ ವಾತಾವರಣ ನಿರ್ಮಿಸಿ ದೇಶದ ಒಗ್ಗಟ್ಟು ಮತ್ತು ಏಕತೆಯನ್ನು ಕಾಪಾಡಿ, ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವುದಕ್ಕೆ  ಒಟ್ಟಾಗಿ ಸೇರಿ ಶ್ರಮಿಸೋಣ...  

“ಕಾಯಕವೇ ಕೈಲಾಸ” ಎಂಬ ಬಸವಣ್ಣನವರ ನುಡಿಯಂತೆ ನಾವೆಲ್ಲ ಸಾಗುತ್ತಾ... ಸನ್ಮಾನ್ಯ ಮೋದಿಜೀ ಅವರ “ಆತ್ಮನಿರ್ಭರ ಭಾರತ” ಸಾಧನೆಯ ಕನಸನ್ನು ನನಸಾಗಿಸೋಣ ಎಂದರು.

ಎಲ್ಲರಿಗೂ ಮತ್ತೊಮ್ಮೆ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ  ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ, ಸಂಸದ ರಾಜಾ ಅಮರೇಶ್ವರ ನಾಯಕ, ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಆರ್.ಡಿ.ಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಪರ್ಣಾ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ, ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ್, ರಾಜ್‌ಶೇಖರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ