ಮೇ. 10 ರಂದು ವಿಧಾನಸಭೆ ಚುನಾವಣೆ ಮತದಾನ ,13 ರಂದು ಮತ ಎಣಿಕೆ: ವಿಧಾನಸಭೆ ಚುನಾವಣೆಗೆ ಸಕಲ ಸಿದ್ದತೆ- ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ
ಮೇ. 10 ರಂದು ವಿಧಾನಸಭೆ ಚುನಾವಣೆ ಮತದಾನ ,13 ರಂದು ಮತ ಎಣಿಕೆ: ವಿಧಾನಸಭೆ ಚುನಾವಣೆಗೆ ಸಕಲ ಸಿದ್ದತೆ- ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ
ರಾಯಚೂರು,ಮಾ.30:- ವಿಧಾನಸಭೆ ಚುನಾವಣೆ-2023ಕ್ಕೆ ಸಂಬ0ಧಿಸಿದ0ತೆ ಮಾ.29ರಿಂದ ನೀತಿ ಸಂಹಿತೆ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗದ0ತೆ, ನೀತಿ ಸಂಹಿತೆ ಉಲ್ಲಂಘನೆಯಾದರೆ ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಹಾಗೂ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಮೇ. 10 ರಂದು ವಿಧಾನಸಭೆ ಚುನಾವಣೆ ಮತದಾನ ,ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದ ಅವರು ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ,ಏ.20 ನಾಮಪತ್ರ ಸಲ್ಲಿಕೆ ಕೊನೆ ದಿನ ,ಏ.21 ನಾಮಪತ್ರ ಪರಿಶೀಲನೆ, ಏ.24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು ಹಾಗೂ ಮಸ್ಕಿ ಸೇರಿದಂತೆ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1840ಮತಗಟ್ಟೆಗಳಿದ್ದು ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸಿದ್ದಪಡಿಸಿಕೊಳ್ಳಲಾಗುತ್ತಿದೆ.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 797553 ಪುರುಷ ಮತದಾರರು, 821035 ಮಹಿಳಾ ಮತದಾರರು ಹಾಗೂ 260 ಇತರೆ ಮತದಾರರು ಸೇರಿದಂತೆ ಒಟ್ಟು 1618848 ಮತದಾರರಿದ್ದಾರೆ ಎಂದರು.
ಈ ಬಾರಿ ಹೊಸ ಮತದಾರರು ಮತ್ತು ಅಂಗವಿಕಲ ಮತದಾರರಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 147 ವಲಯ ಮಟ್ಟದ ಅಧಿಕಾರಿಗಳು, 68 ಫ್ಲೆöÊಯಿಂಗ್ ಸ್ಕಾ÷್ವಡ್‌ಗಳು, ಸ್ಥಾಯಿ ಕಣ್ಗಾವಲು ತಂಡದ ಅಧಿಕಾರಿಗಳು, 23 ದೃಶ್ಯ ಕಣ್ಗಾವಲು ಸಿಬ್ಬಂಧಿಗಳು, 14 ಲೆಕ್ಕ ವಿಭಾಗದ ಅಧಿಕಾರಿಗಳು ಸೇರಿದಂತೆ 14 ನೀತಿ ಸಂಹಿತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ನೀತಿ ಸಂಹಿತೆ ಉಲ್ಲಂಘನೆ ಕಂಡುಬ0ದಲ್ಲಿ ಸಾರ್ವಜನಿಕರು ದೂರನ್ನು ದಾಖಲಿಸಬಹುದಾಗಿದ್ದು, ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 1950 ಅಥವಾ 9743892080,9964449192 ಸಂಖ್ಯೆಗೆ ಕರೆ ಮಾಡಿ ದೂರನ್ನು ಸಲ್ಲಿಸಬಹುದಾಗಿದೆ. ಅಥವಾ ಸಿ ವಿಜಿನ್ ಆ್ಯಪ್ ಬಳಸಿ ದೂರನ್ನು ಸಲ್ಲಿಸಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Comments
Post a Comment