ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ: ಮಹಿಳೆಯರು ಸಮಾಜದಲ್ಲಿ ಇನ್ನು ಹೆಚ್ಚಿನ ಯಶಸ್ಸು ಕಾಣಲಿ- ಶಾಸಕ ಡಾ.ಎಸ್.ಶಿವರಾಜ ಪಾಟೀಲ್
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ: ಮಹಿಳೆಯರು ಸಮಾಜದಲ್ಲಿ ಹೆಚ್ಚಿನ ಯಶಸ್ಸು ಕಾಣಲಿ- ಶಾಸಕ ಡಾ.ಎಸ್.ಶಿವರಾಜ ಪಾಟೀಲ್
ರಾಯಚೂರು,ಮಾ.೨೧- ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ವಲಯಗಳಲ್ಲೂ ಕಾರ್ಯ ನಿರ್ವಹಿಸುತ್ತಾ ಯಶಸ್ವಿ ಬದುಕನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆಯರ ಪಾತ್ರ ಅಪಾರವಾದದ್ದು ಎಂದು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಹೇಳಿದರು.
ಅವರಿಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಸಿ ಮಾತನಾಡಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯದ ಅನೇಕ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನು ಲೆಕ್ಕಿಸದೇ ಕಾರ್ಯ ನಿರ್ವಹಿಸಿದ್ದಾರೆ. ಅಂತಹ ದಿಟ್ಟತನ ಹಾಗೂ ದೈರ್ಯ ಕೇವಲ ಮಹಿಳೆಯರಿಗೆ ಮಾತ್ರ ಬರಲು ಸಾಧ್ಯ ಎಂದರು.
ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸುವ ನಿಟ್ಟಿನಲ್ಲಿ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಮಹೀಲೆಯರ ಸ್ವಸಹಾಯ ಗುಮ
ಗುಂಪುಗಳಿಗೆ ಧನಸಹಾಯವನ್ನು ಮಾಡಿದೆ. ಇದರಿಂದ ಎಷ್ಟೋ ಮಹಿಳೆಯರು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಅನುಕೂಲವಾಗಿದೆ.
ಇದೇ ವೇಳೆ ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ ಮಾತನಾಡಿ, ಜಿಲ್ಲೆಯಲ್ಲಿರುವ ಅಂಗನವಾಡಿಗಳಲ್ಲಿ ಮಕ್ಕಳ ಪೋಷಣೆ, ಆರೋಗ್ಯಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗರ್ಬಿಣ ಮಹಿಳೆಯರ ಪೋಷಣೆಯಲ್ಲಿ ಆಶಾ ಕಾರ್ಯಕರ್ತೆರ ಸೇವೆ ಅನನ್ಯವಾದದ್ದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ್ ಕುಮಾರ ಮಾತನಾಡಿ, ಮಹಿಳೆಯರನ್ನು ದೇವತೆಗಳಿಗೆ ಹೋಲಿಸಲಾಗುತ್ತದೆ. ಪ್ರತಿಯೊಂದು ರಂಗದಲ್ಲೂ ಮಹಿಳೆಯರು ಮುಂದಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡಿ ಸಮಾನರಾಗಿ ಬದುಕು ನಡೆಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚನ್ನಮಲ್ಲಪ್ಪ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಾಮರೆಡ್ಡಿ ಪಾಟೀಲ್, ತಾಲೂಕ ಆರೋಗ್ಯ ಅಧಿಕಾರಿ ಡಾ. ಶಾಕೀರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಂಕಟೇಶ ದೇಸಾಯಿ, ದಂಡಪ್ಪ ಬಿರಾದರ್, ಸ್ತಿçà ಶಕ್ತಿ ಒಕ್ಕೂಟ ಅಧ್ಯಕ್ಷೆ ಈರಮ್ಮ, ಜಿಲ್ಲಾ ಸ್ತಿçà ಶಕ್ತಿ ಒಕ್ಕೂಟ ಕಾರ್ಯದರ್ಶಿ ಶ್ರೀದೇವಿ ಶ್ರೀನಿವಾಸ, ಹೆಚ್.ಪದ್ಮಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Comments
Post a Comment