ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ : ಕನ್ನಡ ಭಾಷೆಯ ಶ್ರೀಮಂತಿಕೆಯಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು- ಚಂದ್ರಶೇಖರ್ ಭಂಡಾರಿ
ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ : ಕನ್ನಡ ಭಾಷೆಯ ಶ್ರೀಮಂತಿಕೆಯಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು- ಚಂದ್ರಶೇಖರ್ ಭಂಡಾರಿ
ರಾಯಚೂರು,ಮೇ.28- ಕನ್ನಡ ಭಾಷೆಯ ಶ್ರೀಮಂತಿಕೆಯಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ್ ಭಂಡಾರಿ ಹೇಳಿದರು. ಅವರಿಂದು ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭವನದಲ್ಲಿ ಆಯೋಜಿಸಿದ್ದ 10ನೇ ತರಗತಿಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದರೆ ಕನ್ನಡ ಭಾಷೆಗೆ ಆದ್ಯತೆ ಕೊಟ್ಟು ಕನ್ನಡದ ಅಸ್ಮಿತೆ ಕಾಪಾಡಬೇಕು ಎಂದರು.
ಕನ್ನಡ ಭಾಷೆ ಸುಮಧುರವಾದ ಭಾಷೆ ಅಷ್ಟೇ ಅಲ್ಲ. ಶ್ರೇಷ್ಠ ಭಾಷೆಯಾಗಿದೆ.
ಆ ಭಾಷೆಯನ್ನು ಇನ್ನು ಉತ್ಕೃಷ್ಟಕ್ಕೆ ಬೆಳೆಸಲು ನಾವೆಲ್ಲ ಶ್ರಮಿಸಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಯಚೂರಿನ ಮಾನಸಿಕ ರೋಗ ತಜ್ಞ ವೈದ್ಯರಾದ ಡಾ. ಮನೋಹರ್ ವೈ ಪತ್ತಾರ ಅವರು ಮಾತನಾಡುತ್ತ, ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊರ ಹಾಕಬೇಕೆಂದರೆ ಅವರಿಗೆ ಮಾನಸಿಕ ಒತ್ತಡ ರಹಿತ ಜೀವನ ಅವರಿಗೆ ಇರಬೇಕು. ತಂದೆ ತಾಯಿಗಳು ಮಾನಸಿಕವಾಗಿ ಮಕ್ಕಳ ಮೇಲೆ ಅನಾವಶ್ಯಕ ಒತ್ತಡ ಹಾಕದೆ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ, ಖಂಡಿತ ಮಕ್ಕಳು ಉತ್ತಮ ಅಂಕಗಳನ್ನು ಪಡೆಯುತ್ತಾರೆ ಎಂದು ಹೇಳಿದರು. ಅಷ್ಟೇ ಅಲ್ಲ ಮಗು ಉತ್ತಮ ಪ್ರತಿಭಾವಂತ ವಿದ್ಯಾರ್ಥಿ ಆಗ್ಬೇಕಂದ್ರೆ ಅವರಿಗೆ ಉತ್ತಮ ಪರಿಸರ, ಉತ್ತಮ ಮಾರ್ಗದರ್ಶನ ಬೇಕು. ಆ ನಿಟ್ಟಿನಲ್ಲಿ ಪಾಲಕರು ಮತ್ತು ಪೋಷಕರು ಹಾಗು ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಹಿರಿಯ ನಿವೃತ್ತ ಉಪನ್ಯಾಸಕರಾದ ಹನುಮಂತಪ್ಪ ಗವಾಯಿ ಅವರು ಮಾತನಾಡುತ್ತ, ಮಕ್ಕಳು ಉನ್ನತ ಮಟ್ಟಕ್ಕೆ ಹೋಗಬೇಕೆಂದರೆ, ತಂದೆ ತಾಯಿಗಳು ಮತ್ತು ಗುರು ಹಿರಿಯರ ಮಾರ್ಗದರ್ಶನ ತುಂಬಾ ಅವಶ್ಯಕ, ಪ್ರತಿಭೆ ಅಂದರೆ ಜ್ಞಾನ ಆ ಜ್ಞಾನವನ್ನು ಪಡೆಯಲು ವಿದ್ಯಾರ್ಥಿಗಳು ತುಂಬಾ ಶ್ರಮಪಡಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ್ ಬೇವಿನಬೆಂಚಿ ಅವರು ಮಾತನಾಡುತ್ತ, ರಾಯಚೂರು ತಾಲೂಕು ಪ್ರದೇಶ ತೆಲುಗನ್ನಡ ಪ್ರದೇಶ. ಇಂತ ಪ್ರದೇಶದಲ್ಲಿ ಕನ್ನಡದಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಸಂಖ್ಯೆ 60ಕ್ಕಿಂತ ಹೆಚ್ಚು. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳು ನಮ್ಮ ತಾಲೂಕಿನಲ್ಲಿ ಇದ್ದದ್ದು ಹೆಮ್ಮೆಯ ಸಂಗತಿ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಇಂತಹ ಪ್ರತಿಭೆಗಳನ್ನು ಗುರುತಿಸಿ ಕಾರ್ಯಕ್ರಮಗಳ ಮಾಡುತ್ತಿರುವುದು ತುಂಬಾ ಗೌರವದ ವಿಚಾರ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಭುಲಿಂಗ ಗದ್ದಿಯವರು ಹಾಗೂ ಕರ್ನಾಟಕ ರಾಜ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ರೆಡ್ಡಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಮಲ್ಲೇಶ ನಾಯಕ್,ಹಾಗೂ ರಾಘವೇಂದ್ರ ಸೇರಿದಂತೆ ಇತರರು ಇದ್ದರು.
ಈ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದ ರಾಯಚೂರು ತಾಲೂಕಿನ ೫೬ ಪ್ರೌಢಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಅಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಕರಾಗಿದ್ದ ಕನ್ನಡ ಭಾಷಾ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ಆಂಜನೇಯ ಕಾವಲಿಯವರು ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭದಲ್ಲಿ ವಿ.ಎನ್ ಅಕ್ಕಿ, ಎಚ್ ಎಚ್ ಮ್ಯಾದಾರ, ವೀರಹನುಮಾನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ರೇಖಾ ಬಡಿಗೇರ, ತೆರೇಸಾ, ರೇಖಾ ಪಾಟೀಲ, ರಾಮಣ್ಣ ಮ್ಯಾದಾರ,ಭಾರತಿ ಕುಲಕರ್ಣಿ,ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಇದ್ದರು.
ಈ ಕಾರ್ಯಕ್ರಮಕ್ಕೆ ಪ್ರತಿಭಾ ಗೋನಾಳ ಪ್ರಾರ್ಥಿಸಿದರು. ರಾವುತ ರಾವ್ ಬರೂರು ಸ್ವಾಗತಿಸಿದರು. ವಿಜಯರಾಜೇಂದ್ರ ಅವರು ನಿರೂಪಿಸಿದರು. ದೇವೇಂದ್ರ ಕಟ್ಟಿಮನಿ ವಂದಿಸಿದರು.
Comments
Post a Comment