ಕಲುಷಿತ ನೀರು ಕುಡಿದು ಅಸ್ವಸ್ಥ- ಸಿಎಂ ಪರಿಹಾರದ ಭರವಸೆ: ಜಿಲ್ಲೆಯಾದ್ಯಂತ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಪರಿಶೀಲಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ.

 


ಕಲುಷಿತ ನೀರು ಕುಡಿದು ಅಸ್ವಸ್ಥ- ಸಿಎಂ ಪರಿಹಾರದ ಭರವಸೆ:               ಜಿಲ್ಲೆಯಾದ್ಯಂತ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಪರಿಶೀಲಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ.


ರಾಯಚೂರು,ಮೇ.29- ಜಿಲ್ಲೆಯ ದೇವದುರ್ಗ ತಾಲೂಕಿನ ರೇಖಲಮರಡಿ ಹಾಗೂ ಲಿಂಗಸ್ಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ವಿಷಪೂರಿತ ಆಹಾರ, ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಮುಂಜಾಗ್ರತೆ ಕ್ರಮವನ್ನು ವಹಿಸಬೇಕು ಅಲ್ಲದೇ ಜಿಲ್ಲೆಯ ಜನರಿಗೆ ಸರಬರಾಜಾಗುವ ಕುಡಿಯುವ ನೀರನ್ನು ಪರಿಶೀಲಿಸಿ ವರದಿ ನೀಡುವಂತೆ ಸಚಿವರಾದ ಎನ್.ಎಸ್ ಬೋಸರಾಜು ಅವರು ಜಿಲ್ಲಾಡಳಿತಕ್ಕೆ  ಸೂಚನೆ ನೀಡಿದ್ದಾರೆ.

ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡ ಘಟನೆಗೆ ತಿಳಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ.

ಅಲ್ಲದೆ ಇಂದು ಬೆಳಗ್ಗೆ ಪರಸ್ಥಿತಿ ತಿಳಿದು ಈಗಾಗಲೆ ಅಸ್ವಸ್ಥರಾಗಿರುವವರಿಗೆ ಜಿಲ್ಲಾ ರಿಮ್ಸ್ ಆಸ್ಪತ್ರೆಯಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಡಿಹೆಚ್ಓ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ ಸೂಚನೆ ನೀಡಿದರು.

ಗಾಗಲೆ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮಗುವಿಗೆ ಸರ್ಕಾರದಿಂದ ಪರಿಹಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ.

ಜಿಲ್ಲೆಯಾದ್ಯಂತ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳ ವಾಸ್ತವ ಸ್ಥಿತಿ ಪರಿಶೀಲಿಸಿ ತಾಂತ್ರಿಕ ದೋಷದಿಂದ ಸ್ಥಗಿತಗೊಂಡ  ಘಟಕಗಳನ್ನು ಜಿಲ್ಲಾಡಳಿತ ಶೀಘ್ರ ದುರಸ್ತಿ ಮಾಡಿ ಕುಡಿಯುವ ನೀರು ಸರಬರಾಜು ಮಾಡಬೇಕು. 

ಮತ್ತೊಮೆ ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ ಬೇಕೆಂದು ಸೂಚನೆ ನೀಡಿದ್ದಾರೆ.


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ