ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರ ಸಭೆ: ಅಂತರ್ಜಲ ಸಮೃದ್ಧಿ, ಕೆರೆಗಳ ಅಭಿವೃದ್ಧಿಗೆ ಕ್ರಮ- ಎನ್.ಎಸ್ ಬೋಸರಾಜು

 


ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರ ಸಭೆ:    
ಅಂತರ್ಜಲ ಸಮೃದ್ಧಿ, ಕೆರೆಗಳ ಅಭಿವೃದ್ಧಿಗೆ ಕ್ರಮ- ಎನ್.ಎಸ್ ಬೋಸರಾಜು


ರಾಯಚೂರು,ಮೇ.30-ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ  ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾಗಿ ಎನ್.ಎಸ್ ಬೋಸರಾಜು ಅವರು ಅಧಿಕಾರ ಅಧಿಕಾರವಹಿಸಿಕೊಂಡ ನಂತರ ಮೊದಲ ಬಾರಿಗೆ ವಿಕಾಸಸೌದದಲ್ಲಿ  ಅಧಿಕಾರಿಗಳ ಜೊತೆ ಸಭೆ ನಡೆಸಿದರು.


ಬೆಂಗಳೂರಿನ ವಿಕಾಸಸೌಧದ ಸಣ್ಣ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಾಂದರ್ಭಿಕ ಸಭೆಯಲ್ಲಿ ಮಾತನಾಡಿ, ಸಣ್ಣ ನೀರಾವರಿಯ ಮೇಲೆ ಅವಲಂಬನೆಯಾಗಿರುವ ರೈತರಿಗೆ ಬೆಳೆಗಳಿಗೆ ತೊಂದರೆಯಾಗದಂತೆ ಕ್ರಮವಹಿಸುವಂತೆ ಸೂಚಿಸಿದರು‌.


ಅಂತರ್ಜಲ ಸಮೃದ್ಧಿಗಾಗಿ ಕೆರೆಗಳ ನಿರ್ಮಾಣ ಹಾಗೂ ಈಗಿರುವ ಕೆರೆಗಳ ವಾಸ್ತವ ಪರಿಸ್ಥಿತಿಯ ವರದಿ ಪಡೆದು  ಅಧಿಕಾರಿಗಳೊಂದಿಗೆ ಸಾಂದರ್ಭಿಕವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಯತೀಶ್ ಚಂದ್ರನ್ ಸೇರಿ ಅನೇಕ ಅಧಿಕಾರಿಗಳು ಇದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ