9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ :ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗಭ್ಯಾಸ

 


9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ:                            
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗಭ್ಯಾಸ

ರಾಯಚೂರು,ಜೂ.೨೧- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪೌರಾಡಳಿತ ಇಲಾಖೆಯ ವತಿಯಿಂದ ಇಂದು ಬೆಳಿಗ್ಗೆ ೬.೩೦ಕ್ಕೆ ೯ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ನಂತರ ಯೋಗ ತರಬೇತುದಾರರಾದ ಡಾ.ತಿಮ್ಮಪ್ಪ ವಡ್ಡೆಪಲ್ಲಿ ಹಾಗೂ ಪೂಜಾ ಅವರು ಯೋಗಭ್ಯಾಸವನ್ನು ಮಾಡಿಸಿದರು. ನಂತರ ಜೂ.೧೯ರಂದು ನಡೆದ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಯೋಗಪಟುಗಳಿಗೆ ಬಹುಮಾನವನ್ನು ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಪ್ರೊಭೇಷನರಿ ಐಎಎಸ್ ಅಧಿಕಾರಿ ಅಪರ್ಣಾ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ರೆಡ್ ಕ್ರಾಸ್ ಸಂಸ್ಥೆಯ ದಂಡಪ್ಪ ಬಿರದಾರ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್