ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರ ಭೇಟಿ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ- ಎನ್ಎಸ್ ಬೋಸರಾಜು


 ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ವಿಜ್ಞಾನ ತಂತ್ರಜ್ಞಾನ  ಸಚಿವರ ಭೇಟಿ.

ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ- ಎನ್ಎಸ್ ಬೋಸರಾಜು


ರಾಯಚೂರು,ಜೂ.16-
ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು ಅವರು  ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪ್ರಗತಿಪರಿಶೀಲನೆ  ನಡೆಸಿದರು.

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತನಾಡಿ, ಜಿಲ್ಲಾ ವಿಜ್ಞಾನ ಕೇಂದ್ರದ ಸರ್ವಾಂಗಣ ಅಭಿವೃದ್ಧಿ ಹಾಗೂ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮಗಳ ಆಯೋಜನೆ ಕುರಿತಂತೆ ಅಧಿಕಾರಿಗಳೊಂದಿಗೆ ಮಾತನಾಡಿದರು.

ಇಲ್ಲಿವರೆಗೆ ಜಿಲ್ಲೆಯಲ್ಲಿ ವಿಜ್ಞಾನ ಕೇಂದ್ರದಿಂದ ಶಾಲಾ-ಕಾಲೇಜುಗಳಲ್ಲಿ  ಏನಿಲ್ಲ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ಪಡೆದರು ಅಲ್ಲದೆ ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರ, ಕ್ಯಾಶುಟೆಕ್  ನಿಂದ ನಡೆದ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ವಿಜ್ಞಾನ ಕೇಂದ್ರದಿಂದ ಯಾವ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಆಯಾ ಶಾಲೆಗಳಲ್ಲಿ  ದಾಖಲೆಗಳನ್ನು ರಿಜಿಸ್ಟರ್ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲೆ ಉಪ ನಿರ್ದೇಶಕರಾದ ವೃಷಭೇಂದ್ರಯ್ಯ ಅವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಜ್ಞಾನ ಕೇಂದ್ರದ ಅಧಿಕಾರಿಯಾದ ಅಜಿತ್, ನಿರ್ಮಿತಿ ಕೇಂದ್ರದ ಗಣಪತಿ ಸಾಕ್ರೆ, ಕ್ಯಾಶುಟೆಕ ಎಸ್ ಎಂ ಪಟ್ಟೆದ್, ಕಾಂಗ್ರೆಸ್ ಮುಖಂಡರಾದ ಶಾಂತಪ್ಪ, ರುದ್ರಪ್ಪ, ಅಂಗಡಿ ಸೇರಿದಂತೆ  ಅನೇಕರು ಉಪಸ್ಥಿತರಿದ್ದರು

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್