ಕಾಡ್ಲೂರು ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಶ್ರೀಪ್ರಾಣದೇವರ ದೇವಸ್ಥಾನ ಜಲಾವೃತ


ಕಾಡ್ಲೂರು ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಶ್ರೀಪ್ರಾಣದೇವರ ದೇವಸ್ಥಾನ ಜಲಾವೃತ 
 ರಾಯಚೂರು,ಜು.29- ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಙಾ ನದಿ ತೀರದ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಶ್ರೀಪ್ರಾಣದೇವರ ದೇವಸ್ಥಾನ ಜಲಾವೃತವಾಗಿದೆ.   

                           ಕೃಷ್ಣಾನದಿಗೆ ನಾರಾಯಣಪೂರು ಜಲಾಶಯದಿಂದ 1.5ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನಲೆಯಲ್ಲಿ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವದರಿಂದ ದೇವಸ್ಥಾನ ಜಲಾವೃತವಾಗಿದೆ. ನಿರಂತರ ಮಳೆಯಿಂದ  ಜಲಾಶಯದಲ್ಲಿ ಒಳ ಹರಿವು ಹೆಚ್ಚಳದಿಂದ ನದಿಗೆ ನೀರು ಬಿಟ್ಟಿದ್ದರಿಂದ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮಳೆ ಮುಂದುವರೆದಲ್ಲಿ ದೇವಸ್ಥಾನ ಮುಳುಗಡೆಯಾಗುವ ಸಾಧ್ಯತೆಯಿದೆ. ಅಧಿಕ ಮಾಸ ಹಿನ್ನೆಲೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇದರಿಂದ ಅನಾನುಕೂಲವಾಗಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ