ಅತಿವೃಷ್ಟಿ: ಬೀಜ, ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಅಧಿಕಾರಿಗಳ ಸಭೆ: ರೈತರಿಗೆ ಬೇಡಿಕೆಯಾನುಸಾರ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಿ- ಸಚಿವ ಶರಣಪ್ರಕಾಶ ಪಾಟೀಲ್
ಅತಿವೃಷ್ಟಿ: ಬೀಜ, ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಅಧಿಕಾರಿಗಳ ಸಭೆ: ರೈತರಿಗೆ ಬೇಡಿಕೆಯಾನುಸಾರ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಿ- ಸಚಿವ ಶರಣಪ್ರಕಾಶ ಪಾಟೀಲ್
ರಾಯಚೂರು,ಜು.30- ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಬೇಡಿಕೆಯಾನುಸಾರ ಪೂರೈಕೆ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದoತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜು.30ರ(ಭಾನುವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿ ಮತ್ತು ಬೀಜ ಮತ್ತು ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮುಂಗಾರು ತಡವಾಗಿ ಆರಂಭವಾಗಿದ್ದು, ಇದೀಗ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ರೈತರ ಬೆಳೆಗಳಿಗೆ ಹಾನಿ ಉಂಟಾಗುವ ಸಾಧ್ಯತೆಗಳಿರುವುದರಿಂದ ಅಧಿಕಾರಿಗಳು ಸಮಿಕ್ಷೆ ನಡೆಸಿ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.
2023ನೇ ಸಾಲಿನಲ್ಲಿ ಜೂ.01ರಿಂದ ಇಲ್ಲಿಯವರೆಗೆ ಭಾರಿ ಮಳೆ, ಪ್ರವಾಹ, ಸಿಡಿಲು ಬಡಿತದಿಂದ ಒಟ್ಟು ಒಂದು ಮಾನವ ಜೀವಹಾನಿ, ಒಂದು ಜಾನುವಾರು ಜೀವ ಹಾನಿಯಾಗಿದ್ದು, ಪರಿಹಾರವನ್ನು ನೀಡಲಾಗಿದೆ. 254 ಮನೆಗಳಿಗೆ ಹಾನಿ ಉಂಟಾಗಿದೆ. ಯಾವುದೇ ಬೆಳೆ ಹಾನಿಗೆ ಸಂಬoಧಿಸಿದ ಪ್ರಕರಣಗಳು ಕಂಡುಬoದಿಲ್ಲ ಆದರೆ ಮುoದಿನ ದಿನಗಳಲ್ಲಿ ಮಳೆಯಿಂದ ಯಾವುದೇ ಹಾನಿ ಉಂಟಾದಲ್ಲಿ ಅಧಿಕಾರಿಗಳು ಪರಿಹಾರ ಒದಗಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ರೈತರಿಗೆ ನೀಡಲಾಗುವ ಬಿತ್ತನೆ ಬೀಜಗಳು ಕಳಪೆ ಮಟ್ಟದಿಂದ ಕೂಡಿರುವ ದೂರುಗಳು ಬಂದಲ್ಲಿ ಅಧಿಕಾರಿಗಳು ಕಳಪೆ ಬೀಜ ಪೂರೈಕೆ ಮಾಡಿದ ಅಂಗಡಿಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಮಾತನಾಡಿ, ರಾಯಚೂರು ನಗರದಲ್ಲಿ ಮಳೆಯ ಕಾರಣದಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಹೋಗಿದ್ದು, ರಸ್ತೆಗಳನ್ನು ದುರಸ್ತಿ ಮಾಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಸಿಂಧನೂರು ಶಾಸಕ ಹoಪನಗೌಡ ಬಾದರ್ಲಿ, ದೇವದುರ್ಗ ಶಾಸಕಿ ಜಿ.ಕರೆಮ್ಮ ನಾಯಕ, ಮಾನವಿ ಶಾಸಕ ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಲಿಂಗಸುಗೂರು ಸಹಾಯಕ ಆಯುಕ್ತ ಶಿಂಧೆ ಅವಿನಾಶ, ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ರಾಯಚೂರು ಸಹಾಯಕ ಆಯುಕ್ತೆ ಮಹಿಬೂಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್. ದೇವಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Comments
Post a Comment