ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ:. ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷ ವಸ್ತ್ರ ಗುರುರಾಯರಿಗೆ ಸಮರ್ಪಣೆ
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ: ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷ ವಸ್ತ್ರ ಗುರುರಾಯರಿಗೆ ಸಮರ್ಪಣೆ ರಾಯಚೂರು,ಸೆ.1-ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಅಂಗವಾಗಿ ತಿರುಪತಿ ತಿರುಮಲ ದೇವಸ್ಥಾನದಿಂದ ಮಂತ್ರಾಲಯಕ್ಕೆ ಆಗಮಿಸಿ ಶೇಷ ವಸ್ತ್ರವನ್ನು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಅಧಿಕಾರಿಗಳು, ಸಿಬ್ಬಂದಿಗಳು ಸ್ವಾಗತಿಸಿದರು. ಶ್ರೀ ಮಠದ ಆವರಣದಿಂದ ಸಕಲ ವಾಧ್ಯಗಳ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶೇಷ ವಸ್ತ್ರವನ್ನು ಸ್ವೀಕರಿಸಿ ತಲೆಯ ಮೇಲೆ ಹೊತ್ತು ಮೂಲ ವೃಂದಾವನ ಪ್ರದಕ್ಷಿಣೆ ಮಾಡುವ ಮೂಲಕ ರಾಯರಿಗೆ ಸಮರ್ಪಿಸಿದರು. ನಂತರ ಶ್ರೀಗಳು ಮಾತನಾಡಿ, ಇಂದು ಭೂ ಲೋಕದ ಒಡೆಯ ಶ್ರೀನಿವಾಸ ದೇವರ ಶೇಷ ವಸ್ತ್ರದ ಮೂಲಕ ಗುರುರಾಯರ ಸನ್ನಿಧಾನಕ್ಕೆ ಬಂದಿದ್ದಾನೆ, ಕಳೆದ ಅನೇಕ ವರ್ಷಗಳಿಂದ ಗುರುರಾಯರ ಆರಾಧನೆ ಸಮಯದಲ್ಲಿ ಪ್ರತಿ ವರ್ಷ ತಿರುಪತಿಯ ಶ್ರೀನಿವಾಸನ ಸನ್ನಿಧಿಯಿಂದ ಶೇಷ ವಸ್ತ್ರವನ್ನು ಅಲ್ಲಿನ ದೇವಸ್ಥಾನ ಆಡಳಿತ ಮಂಡಳಿ ತಪ್...