ಗೃಹಲಕ್ಷ್ಮೀ ಮೂಲಕ ಮಹಿಳೆಯರಿಗೆ ಕುಟುಂಬ ನಿರ್ವಹಣೆ ಮಾಡುವ ಶಕ್ತಿ ನೀಡಿದ ರಾಜ್ಯ ಸರ್ಕಾರ- ಶಾಸಕ ಬಸನಗೌಡ ದದ್ದಲ್

 


ಗೃಹಲಕ್ಷ್ಮೀ ಮೂಲಕ ಮಹಿಳೆಯರಿಗೆ ಕುಟುಂಬ ನಿರ್ವಹಣೆ ಮಾಡುವ ಶಕ್ತಿ ನೀಡಿದ ರಾಜ್ಯ ಸರ್ಕಾರ- ಶಾಸಕ ಬಸನಗೌಡ ದದ್ದಲ್

ರಾಯಚೂರು,ಆ.೩೦- ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಎರಡು ಸಾವಿರ ರೂ.ಗಳನ್ನು ಜಮಾ ಮಾಡುವ ಮೂಲಕ ಮಹಿಳೆಯರಿಗೆ ಕಷ್ಟದ ಸಂದರ್ಭದಲ್ಲಿ ಕುಟುಂಬ ನಿರ್ವಹಣೆ ಮಾಡುವ ಶಕ್ತಿಯನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.

ಅವರಿಂದು ತಾಲೂಕಿನ ದೇವಸುಗೂರು ಗ್ರಾಮದ ಶಕ್ತಿನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು  ತಾಲೂಕು ಪಂಚಾಯತ್, ದೇವಸುಗೂರು ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಭರವಸೆಯಂತೆ ಐದು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈಗಾಗಲೇ ಮೂರು ಯೋಜನೆಯಗಳ ಸೌಲಭ್ಯಗಳನ್ನು ಯಶಸ್ವಿಯಾಗಿ ಜನರಿಗೆ ನೀಡಿರುವ ಸರ್ಕಾರ ಇದೀಗ ಸರ್ಕಾರದ ಮತ್ತೊಂದು ಮಹತ್ತರ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಎರಡು ಸಾವಿರ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಮಹಿಳೆಯರು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. 

ರಾಜ್ಯ ಸರ್ಕಾರ ಈಗಾಗಲೇ ಹಲವು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಕ್ತಿ ಯೋಜನೆಯಡಿ ಪ್ರತಿಯೊಬ್ಬ ಮಹಿಳೆಯರು ಉಚಿತವಾಗಿ ಸರ್ಕಾರಿ ಸಾರಿಗೆ ಬಸ್ ಪ್ರಯಾಣವನ್ನು ಮಾಡುವ ಸೌಲಭ್ಯವನ್ನು ನೀಡಿದೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ ಪ್ರತಿ ಮನಗೆ ೨೦೦ಯೂನಿಟ್ ಉಚಿತ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿಯಲ್ಲೂ ಕೂಡ ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದರು.


ಇದೀಗ ಸರ್ಕಾರದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ೨೦೦೦ರೂ.ಗಳನ್ನು ಅವರು ಖಾತೆಗೆ ವರ್ಗಾವಣೆ ಮಾಡಲಾಗುವುದು ಮತ್ತು ಯೋಜನೆಯ ಚಾಲನೆಯನ್ನು ಇಂದು  ರಾಜ್ಯದ ಎಲ್ಲಾ ಕಡೆಗಳಲ್ಲಿ ಏಕಕಾಲಕ್ಕೆ ನೀಡಲಾಗುತ್ತಿದ್ದು, ಜಿಲ್ಲೆಯ ೨ ನಗರಸಭೆ, ೫ ಪಟ್ಟಣ ಪಂಚಾಯತ್, ೫ ಪುರಸಭೆ ಹಾಗೂ ೧೭೯ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ೨೬೦ ವಾರ್ಡ್ಗಳ ೨೦ ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು ೩೬೫೧೪೫ ಫಲಾನುಭವಿಗಳು ಗೃಹಲಕ್ಷಿö್ಮ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದ್ದು, ಅದರಲ್ಲಿ ಒಟ್ಟು ೩,೬೪,೦೫೯ ಮಹಿಳೆಯರಿಗೆ ಈ ಯೋಜನೆಯಡಿ ಮಂಜೂರಾತಿ ಆದೇಶವನ್ನು ನೀಡಲಾಗಿದ್ದು, ಈ ಸೌಲಭ್ಯದಡಿ ಎಲ್ಲಾ ಮಹಿಳೆಯರ ಖಾತೆಗೆ ೨ಸಾವಿರ ರೂಪಾಯಿ ಜಮೆಯಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ. ಇದರಿಂದ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣಕ್ಕೆ ಈ ಹಣವನ್ನು ಬಳಸಬಹುದು. ಇಂತಹ ಹಲವು ಸಾರ್ವಜನಿಕರ ಪರವಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಸಹಾಯಕ ಆಯುಕ್ತೆ ಮಹಿಬೂಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ ಕುಮಾರ, ಎಪಿಎಂಸಿ ಉಪಾಧ್ಯಕ್ಷ ಬಶೀರುದ್ದೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 



Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್