ರಾಯಚೂರು ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ: ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ- ಶಾಸಕ ಬಸನಗೌಡ ದದ್ದಲ್


ರಾಯಚೂರು ತಾಲೂಕು ಪಂಚಾಯತ್  ತ್ರೈ ಮಾಸಿಕ ಕೆಡಿಪಿ ಸಭೆ:                                                 
ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ- ಶಾಸಕ ಬಸನಗೌಡ ದದ್ದಲ್       
ರಾಯಚೂರು,ಆ.೨೮- ರಾಯಚೂರು ತಾಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಶೌಚಾಲಯಗಳಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ತಾಲೂಕು ಪಂಚಾಯತಿಯ ಪ್ರಥಮ ತ್ರೆöÊಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ರಾಯಚೂರು ತಾಲೂಕು ವ್ಯಾಪ್ತಿಯಲ್ಲಿರುವ ಅಂಗನವಾಡಿ, ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಮತ್ತು ಅಂಗನವಾಡಿ ಕೇಂದ್ರ ಹಾಗೂ ಸಾಳೆಗಳ ಸುತ್ತಲೂ ಕಾಂಪೌಂಡ್ ವ್ಯವಸ್ಥೆಯಿರುವಂತೆ ಮತ್ತು ಸುತ್ತಮುತ್ತಲೂ ಸ್ವಚ್ಛತೆ, ಬಿಸಿಯೂಟ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ನಿಡಲಾಗುವ ಪೌಷ್ಠಿಕಾಂಶಯುಕ್ತ ಆಹಾರದಲ್ಲಿ ಯಾವುದೇ ದೋಷಗಳಾಗಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. 


ಆ.೩೦ರಂದು ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಆ ಕಾರ್ಯಕ್ರಮದ ನೇರ ಪ್ರಸಾರ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯಾ ಗ್ರಾಮ ಪಂಚಾಯತ್ ಅಧಿಕಾರಿಗಳು ಏರ್ಪಡಿಸಬೇಕು ಮತ್ತು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. 

ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು. ಅದಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ೩೦೦ ಜನ ಫಲಾನುಭವಿಗಳನ್ನು ಸೇರಿಸಬೇಕು ಮತ್ತು ಕಾರ್ಯಕ್ರಮಕ್ಕೆ ಆಗಮಿಸವವರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ರಾಜ್ಯಮಟ್ಟದ ಕಾರ್ಯಕ್ರಮ ವೀಕ್ಷಣೆಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್.ಇ.ಡಿ ಟಿವಿ ಅಥವಾ ಪ್ರಾಜೆಕ್ಟರ್ ಪರದೆಯನ್ನು ಅಳವಡಿಸಬೇಕು ಮತ್ತು ಅದರ ಮೂಲಕ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಿಸಬೇಕು ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಅವರು ಮಾತನಾಡಿ, ತಾಲೂಕು ನೋಡೆಲ್ ಅಧಿಕಾರಿಗಳು ಗೃಹ ಲಕ್ಷಿö್ಮ ಯೋಜನೆಯ ಕಾರ್ಯಕ್ರಮದ ಸಿದ್ದತೆಗಳನ್ನು ಪ್ರತಿ ಪಂಚಾಯತಿಗೆ ಭೇಟಿ ನೀಡಿ ಸರಿಯಾದ ರೀತಿಯಲ್ಲಿ ನಡೆಯುತ್ತಿದೇಯೇ ಎಂಬುವುದನ್ನು ನೋಡಿಕೊಳ್ಳಬೇಕು ಮತ್ತು ಗ್ರಾಮಗಳಲ್ಲಿರುವ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಮಾಡದೇ ಇನ್ನಿತರ ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು  ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಬಂದವರಿಗೆ ಊಟದ ವ್ಯವಸ್ಥೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ.ವಿ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಆರ್.ಎ.ಪಿ.ಎಂ.ಸಿ ಅಧ್ಯಕ್ಷ ಜಯಂತರಾವ್ ಪತಂಗೆ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಸ್ವಾಮಿ, ಎಪಿಎಂಸಿ ಉಪಾಧ್ಯಕ್ಷ ಬಶೀರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ