ಮಂತ್ರಾಲಯದಲ್ಲಿ ರಾಯರ ಪೂರ್ವಾರಾಧನೆ: ಶ್ರೀರಂಗಂ- ಅಹೋಬಲ ಕ್ಷೇತ್ರದಿಂದ ಗುರುರಾಯರಿಗೆ ಶೇಷ ವಸ್ತ್ರ ಸಮರ್ಪಣೆ
ಮಂತ್ರಾಲಯದಲ್ಲಿ ರಾಯರ ಪೂರ್ವಾರಾಧನೆ: ಶ್ರೀರಂಗಂ- ಅಹೋಬಲ ಕ್ಷೇತ್ರದಿಂದ ಗುರುರಾಯರಿಗೆ ಶೇಷ ವಸ್ತ್ರ ಸಮರ್ಪಣೆ ರಾಯಚೂರು,ಆ.31- ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಅಂಗವಾಗಿ ತಮಿಳುನಾಡಿನ ಶ್ರೀ ಕ್ಷೇತ್ರ ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನ ಹಾಗೂ ಆಂದ್ರಪ್ರದೇಶದ ಅಹೋಬಲ ನರಸಿಂಹಸ್ವಾಮಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ಆಗಮಿಸಿದ ಶೇಷ ವಸ್ತ್ರವನ್ನು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಅಧಿಕಾರಿಗಳು, ಸಿಬ್ಬಂದಿಗಳು ಸ್ವಾಗತಿಸಿದರು.
ಶ್ರೀ ಮಠದ ಆವರಣದಿಂದ ಸಕಲ ವಾಧ್ಯಗಳ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.
ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶೇಷ ವಸ್ತ್ರವನ್ನು ಸ್ವೀಕರಿಸಿ ರಾಯರಿಗೆ ಸಮರ್ಪಿಸಿದರು.
ನಂತರ ಶ್ರೀಗಳು ಮಾತನಾಡಿ, ಶ್ರೀರಂಗಂ-ಅಹೋಬಲ ಕ್ಷೇತ್ರದಿಂದ ಶೇಷ ವಸ್ತ್ರ ಗುರುರಾಯರಿಗೆ ಸಮರ್ಪಣೆಯಾಗಿದ್ದು, ಎಲ್ಲ ಪುಣ್ಯಕ್ಷೇತ್ರಗಳ ಫಲ ಮಂತ್ರಾಲಯಕ್ಕೆ ಬಂದಿದೆ. ಐತಿಹಾಸಿಕ ದೈವಿಕ ಕ್ಷೇತ್ರಗಳಿಂದ ಬಂದಿರುವ
ಶೇಷವಸ್ತ್ರದ ಮೂಲಕ ರಾಯರಿಗೆ ಅನುಗ್ರಹಿಸಿದ್ದಾರೆ.
ಅಹೋಬಲ ಕ್ಷೇತ್ರದ ನರಸಿಂಹಸ್ವಾಮಿ ಹಾಗೂ ಶ್ರೀರಂಗಂ ಕ್ಷೇತ್ರದೊಂದಿಗೆ ಶ್ರೀ ಮಠ ಅವಿನಾಭಾವ ಸಂಬಂಧ ಹೊಂದಿದೆ ಎಂದರು.
ಈ ಸಂದರ್ಭದಲ್ಲಿ ಅಹೋಬಲ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿ ಸಂಪತ್, ಅರ್ಚಕ ರಮೇಶ್ ಆರ್ಚಾಯ, ಶ್ರೀ ರಂಗಂ ಕ್ಷೇತ್ರದ ಗೋಪಾಲನ್,ವಿದ್ವಾನ ಸುಧೀಂದ್ರ ಅಚಾರ್ಯ, ಶ್ರೀ ಧರ ಆಚಾರ್ಯ, ಶ್ರೀ ಮಠದ ಆಡಳಿತಾಧಿಕಾರಿ ಮಾಧವಶೆಟ್ಟಿ, ವ್ಯವಸ್ಥಾಪಕ ಎಸ್.ಕೆ ಶ್ರಿನಿವಾಸರಾವ್, ಗುರುಸಾರ್ವಭೌಮ ವಿದ್ಯಾಪೀಠದ ಪ್ರಚಾರ್ಯರಾದ ರಮಣರಾವ, ಶ್ರೀ ಮಠದ ಮಾಧ್ಯಮ ಉಸ್ತುವಾರಿ ಶ್ರೀ ನಿಧಿ ಸೇರಿದಂತೆ ಗುರುಸಾರ್ವಭೌಮ ವಿದ್ಯಾಪೀಠದ ವಿದ್ಯಾರ್ಥಿಗಳು, ಶ್ರೀ ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments
Post a Comment