ರಾಗಿಮಾನಗಡ್ಡ ಸಮುದಾಯ ಭವನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ
ರಾಗಿಮಾನಗಡ್ಡ ಸಮುದಾಯ ಭವನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ
ರಾಯಚೂರು,ಆ.೩೦- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ನಗರದ ರಾಗಿಮಾನಗಡ್ಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ನಗರಸಭೆ ಹಿರಿಯ ಸದಸ್ಯರಾದ ಜಯಣ್ಣ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೈಸೂರಿನಲ್ಲಿ ನಡೆದ ಗೃಹಲಕ್ಷಿö್ಮ ಯೋಜನೆಯ ಚಾಲನಾ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹ್ಮದ್ ಜಿಲಾನಿ, ಸೇರಿದಂತೆ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.
Comments
Post a Comment