ಕರ್ನಾಟಕ ಬಂದ್ ಗೆ ಕರವೇ ಬೆಂಬಲ.


 ಕರ್ನಾಟಕ ಬಂದ್ ಗೆ ಕರವೇ ಬೆಂಬಲ.                                ರಾಯಚೂರು,ಸೆ.29- ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದು ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ )ಬಣ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

           ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಈ ಕೂಡಲೆ ಕಾವೇರಿ ನೀರು ತಮಿಳು ನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ ಅವರು ಸಿಎಂ ಸುಗ್ರೀವಾಜ್ಞೆ ಹೊರಡಿಸಿ ನೀರು ಹರಿಸುವುದನ್ನು ನಿಲ್ಲಿಸಬೇಕೆಂದರು.                                     ಕೆಆರ್ ಎಸ್ ಜಲಾಶಯ ಬರಿದಾಗಿದ್ದು ಕುಡಿಯಲು ನೀರಿಲ್ಲದೆ ಪರಿತಪಿಸಬೇಕಾದ ಸ್ಥಿತಿಯಿದ್ದು ಮುಂದಿನ ದಿನಗಳಲ್ಲಿ ಬೆಂಗಳೂರಿಗರು ನೀರಿಲ್ಲದೆ ಹಾಹಾಕಾರ ಪಡುವ ಸನ್ನಿವೇಶ ಎದುರಾಗಲಿದ್ದು ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕೆಂದರು.                                     ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ವೀರೇಶ ಹೀರಾ, ವೀರೇಶ ರೆಡ್ಡಿ,ವೆಂಕಟೇಶ ರೆಡ್ಡಿ,ತುಳಜಾರಾಮ, ಶ್ಯಾಮ, ರಾಜು, ವಿರುಪನಗೌಡ, ರಮೇಶ್ ಸೇರಿದಂತೆ ಅನೇಕರಿದ್ದರು
.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ