ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸರ್ವಜನಿಕರ ಅಹವಾಲು ಸಲ್ಲಿಕೆಗೆ ಜನತಾ ದರ್ಶನ - ಎಡಿಸಿ ಡಾ.ಕೆ.ಆರ್ ದುರುಗೇಶ

 


ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ  ಸರ್ವಜನಿಕರ ಅಹವಾಲು ಸಲ್ಲಿಕೆಗೆ ಜನತಾ ದರ್ಶನ- ಎಡಿಸಿ ಡಾ.ಕೆ.ಆರ್ ದುರುಗೇಶ

ರಾಯಚೂರು,ಸೆ.24- ಸೆ.25ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳಾಗದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ತಿಳಿಸಿದರು.


ಅವರು ಇಂದು ನಗರದ ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಅಹವಾಲು ಸ್ವೀಕರಿಸಲು 20 ವಿವಿಧ ಇಲಾಖೆಯ ಸ್ಟಾಲ್‍ಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಸ್ಟಾಲ್ ಗಳಲ್ಲಿಯೂ  ಡಾಟಾ ಎಂಟ್ರಿ ಆಪರೇಟರ್ ಹಾಗೂ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು ಡಾಟಾ ಎಂಟ್ರೀ ಆಪರೇಟರ್ ಗಳು ಎರಡು ಅರ್ಜಿಗಳ ಪ್ರತಿಗಳನ್ನು ಸ್ವೀಕರಿಸಿ ಅದರಲ್ಲಿ ಒಂದು ಅರ್ಜಿಯನ್ನು ಸ್ವೀಕೃತಿಯಾಗಿ ಸಾರ್ವಜನಿಕರಿಗೆ ನೀಡುವರು. ಸಾಧ್ಯವಿರುವ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗುವುದು ಮತ್ತು ಉಳಿದ ಅರ್ಜಿಗಳನ್ನು ಐಪಿಜಿಆರ್‍ಎಸ್ ಪೋರ್ಟಲ್ ನಲ್ಲಿ ನೊಂದಾಯಿಸಲಾಗುವುದು ಮತ್ತು ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.


ಸಾರ್ವಜನಿಕರ ದೂರುಗಳು, ಅಹವಾಲುಗಳನ್ನು ಸ್ವೀಕರಿಸಲು ಸೆ.25ರಂದು ನಗರದ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ಜನತಾದರ್ಶನ ಎಂಬ ಕಾರ್ಯಕ್ರಮವನ್ನು ಸರ್ಕಾರದಿಂದ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ದೂರುಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅದಕ್ಕಾಗಿ ಇಲಾಖಾವಾರು ಸ್ಟಾಲ್‍ಗಳನ್ನು ಸ್ಥಾಪಿಸಲಾಗಿದ್ದು, ಆಯಾ ಇಲಾಖೆಯ ಆಧಿಕಾರಿಗಳು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ಅವರಿಗೆ ಅರ್ಜಿಯ ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


 ಸರ್ಕಾರದ ವಿವಿಧ ಸೌಲಭ್ಯ ಪಡೆದುಕೊಳ್ಳಲು ಹಾಗೂ ಸಾರ್ವಜನಿಕರ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ ಸೆ.25ರಂದು ರಾಯಚೂರು ಜಿಲ್ಲಾ ಕ್ರೀಡಾಂಗಣದಲ್ಲಿ 'ಜನತಾ ದರ್ಶನ' ಕಾರ್ಯಕ್ರಮ ಆಯೋಜಿಸಲಾಗಿದೆ.

ಜನತಾ ದರ್ಶನ ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು  ಚಾಲನೆ ನೀಡುವರು ಮತ್ತು ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸುವರು‌ ಎಂದು ತಿಳಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ ಯಾವುದೇ ಕುಂದುಕೊರತೆ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ  ಸ್ಟಾಲ್ಗಳನ್ನು ಸ್ಥಾಪಿಸಲಾಗಿದ್ದು, ಕಾರ್ಯಕ್ರಮದಲ್ಲಿ ಒಂದೇ ಸೂರಿನಡಿ ಪ್ರತಿ ಇಲಾಖೆಗೂ ಪ್ರತ್ಯೇಕ ಕೌಂಟರ್ ತೆರೆಯಲಾಗಿದ್ದು, 

ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು, ಮಜೂರಿ, ಜಿಲ್ಲಾ ನೋಂದಣಿ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆಗಳು ಸೇರಿದಂತೆ  ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಜಿಲ್ಲೆಯ ನಾಗರಿಕರು ಈ ಕಾರ್ಯಕ್ರಮದಲ್ಲಿ ತಮ್ಮ ಅರ್ಜಿ ಮತ್ತು ಅಹವಾಲುಗಳನ್ನು ಸಲ್ಲಿಸಿ ಜನತಾ ದರ್ಶನದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್