ನವೆಂಬರ್ 1ರಂದು ರಾಜ್ಯೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು

 


ನವೆಂಬರ್ 1ರಂದು ರಾಜ್ಯೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು

ರಾಯಚೂರು,ಅ.31- ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು ನಾಳೆ ನವೆಂಬರ್ 01ರಂದು ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮದ ಜೊತೆಗೆ ನಡೆಯಲಿರುವ  ಇನ್ನೀತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ .

 ನವೆಂಬರ್ 01ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯ ಬರೆಯುವುದು.

 ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆ ಪ್ರಸಾರ.

ನವೆಂಬರ್ 1 ರ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ.

 ನವೆಂಬರ್ 1ರ ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಹಾಗೂ ನಗರ ಪ್ರದೇಶಗಳ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.



Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್

ತರಕಾರಿ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಂಬಾಜಿರಾವ್ ಒತ್ತಾಯ