ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.
ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ. ರಾಯಚೂರು, ಅ.19- ಪ್ರಗತಿಪರ ಸಾವಯವ ಕೃಷಿಕರು, ಸಮಾಜ ಸೇವಕರು, ಖಾದಿ ಗ್ರಾಮೋದ್ಯೋಗ ಮಂಡಳಿ ನೌಕರರ ಸಂಘಟನೆ ಮಾಜಿ ಅಧ್ಯಕ್ಷರು, ಬ್ರಾಹ್ಮಣ ಸಮಾಜದ ಮುಖಂಡರು, ಮಹಾಮಾಯಾ ದೇವಸ್ಥಾನದ ಮಾಜಿ ಆಡಳಿತಾಧಿಕಾರಿಗಳಾದ ಪ್ರಕಾಶ್ ಅನಂತರಾವ್ ದೇಸಾಯಿ ಚನ್ನಪನಹಳ್ಳಿ(68) ಅನಾರೋಗ್ಯದಿಂದ ಬುಧುವಾರ ರಾತ್ರಿ ನಿಧನರಾಗಿದ್ದಾರೆ. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ,ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಮೃತರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿ ದ್ದಾರೆ. ಮೃತರ ಅಂತ್ಯಕ್ರಿಯೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚನ್ನಪನಹಳ್ಳಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲ ತಿಳಿಸಿದೆ.
Comments
Post a Comment