ಬರಗಾಲ, ಕುಡಿಯುವ ನೀರಿನ ಸಮಸ್ಯೆ ಕುರಿತು ಸಚಿವರ ಸಭೆ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಿ- ಸಚಿವ ಡಾ.ಶರಣಪ್ರಕಾಶ.ಆರ್ ಪಾಟೀಲ್
ಬರಗಾಲ, ಕುಡಿಯುವ ನೀರಿನ ಸಮಸ್ಯೆ ಕುರಿತು ಸಚಿವರ ಸಭೆ:
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಿ - ಡಾ.ಶರಣಪ್ರಕಾಶ.ಆರ್ ಪಾಟೀಲ್
ರಾಯಚೂರು,ಅ.21 -ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ, ನಗರ ಪ್ರದೇಶಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಹೆಚ್ಚಿನ ಒತ್ತು ನೀಡಿ ಜನರಿಗೆ ತೊಂದರೆಯಾಗದಂತೆ ಹಾಗೂ ಬೆಳೆ ನಷ್ಟ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ, ಜೀವನೋಪಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ.ಆರ್ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬರಗಾಲ ಹಾಗೂ ಕುಡಿಯುವ ನೀರಿನಸಮಸ್ಯೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬರಗಾಲ ಪೀಡಿತ ತಾಲೂಕುಗಳಲ್ಲಿ ಕೈಗೊಳ್ಳಲಾದ ಬೆಳೆ ಸಮೀಕ್ಷೆಯ ವರದಿಯನ್ನಾದರಿಸಿ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ಶ್ರಮಿಸಬೇಕು ಮತ್ತು ಗ್ರಾಮೀಇಣ ಭಾಗದಲ್ಲಿ ಕುಡಿಯುವ ನೀರನದನು ಸರಬಾರಾಜು ಮಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳವೇಕು. ಹಳ್ಳಗಳಲ್ಲಿ ವ್ಯರ್ಥವಾಗಿ ಹರಿದುಹೋಗುತ್ತಿರುವ ನೀರನ್ನು ತಡೆಯುವುದರಿಂದ ಆ ನೀರು ಜಾನುವಾರುಗಳಿಗೆ ಕುಡಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕೈಗಾರಿಕೆಗಳಿಗೆ ಹಾಗೂ ಏತ ನೀರಾವರಿಗೆ ಸಧ್ಯದ ಪರಿಸ್ಥಿತಿಯಲ್ಲಿ ನೀರನ್ನು ಬಿಡದೇ ಸ್ಥಗಿತಗೊಳಿಸಿ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಬೇಕು. ಕುಡಿಯುವ ನೀರಿಗೆ ಅಲ್ಲಿನ ಶಾಸಕರು ಮತ್ತು ಅಧಿಕಾರಿಗಳ ಸಹಕಾರದಿಂದ ಕಾರ್ಯ ನಿರ್ವಹಿಸಬೇಕು ಮತ್ತು ಮುಂದಿನ ದಿನಗಳಲ್ಲಿ ರಾಜ್ಯ ಉಳಿದ ಬರಪೀಡಿತ ತಾಲೂಕುಗಳಲ್ಲಿ ಜಿಲ್ಲೆಯ ಉಳಿದ ತಾಲೂಕುಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿಗಳು, ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಜಂಟಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ನೀರಿನ ಮೂಲಗಳನ್ನು ಗಮನಿಸಿ ಕ್ರಿಯಾಯೋಜನೆ ತಯಾರಿಸಬೇಕು. ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಗಳಲ್ಲಿ ಅನುದಾನ ಲಭ್ಯವಿದ್ದು, ಕುಡಿಯುವ ನೀರಿಗಾಗಿ ಸರ್ಕಾರದಿಂದ ೬೦ಲಕ್ಷ ನೀಡಲಾಗುತ್ತಿದ್ದು, ೫೦ಲಕ್ಷ ಕುಡಿಯುವ ನೀರಿನ ಕಾಮಗಾರಿಗಳಿಗೆ ಹಾಗೂ ೧೦ಲಕ್ಷ ರೂ.ಗಳನ್ನು ಬೋರ್ ವೆಲ್ ಗಳಿಗೆ ಬಳಸುವಂತೆ ಸೂಚಿಸಿದರು.
ಪ್ರತಿ ತಾಲೂಕು ಪಂಚಾಯತಿಗಳ ಇಒ ಗಳು ಗ್ರಾಮ ಪಂಚಾಯತ್ ಗಳೊಂದಿಗೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಬೇಕು. ಪ್ರತಿ ಗ್ರಾಮದಲ್ಲಿ ಕೈಗೊಳ್ಳಲಾದ ಕುಡಿಯುವ ನೀರಿನ ಕಾಮಗಾರಿಗಳನ್ನು ಸರೊಯಾದ ರೀತಿಯಲ್ಲಿ ಪರಿಶೀಲಿಸಿ ಜನರಿಗೆ ಸರಿಯಾದ ರೀತಿಯಲ್ಲಿ ನೀರು ತಲುಪುವಂತೆ ನೋಡಿಕೊಳ್ಳಬೇಕು. ಎಲ್ಲಾ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತ್ ಗಳಿಗೆ ನೀರಿನ ಸರಬರಾಜಿಗೆ ಅನುದಾನ ಮೀಸಲಿಡಬೇಕು. ಮತ್ತು ತಹಶೀಲ್ದಾರ್ ಗಳು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಆದ ಬೆಳೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸಿದರು.
ನಗರ ಪ್ರದೇಶದಲ್ಲಿ ಸ್ವಚ್ಛತೆ ಅತ್ಯಂತ ಮುಖ್ಯವಾಗಿದ್ದು, ನಗರ ಪ್ರದೇಶಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜುರವರು ಮಾತನಾಡಿ ಬರಗಾಲ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ನಿಭಾಯಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಂಸದರು , ಶಾಸಕರು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಾನವಿ ಶಾಸಕ ಜಿ.ಹಂಪಯ್ಯ ನಾಯಕ, ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲ್, ದೇವದುರ್ಗ ಶಾಸಕಿ ಜಿ.ಕರೆಮ್ಮ ನಾಯಕ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ರಾಯಚೂರು ಸಹಾಯಕ ಆಯುಕ್ತೆ ಮಹಿಬೂಬಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ ರೋಣಿ, ಜಿ.ಪಂ ಯೋಜನಾ ನಿರ್ದೇಶಕ ಪ್ರಕಾಶ.ವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Comments
Post a Comment