ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಡಿ.3 ರಂದು ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ - ಮಿರ್ಜಾಪೂರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಡಿ.3 ರಂದು ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ - ಮಿರ್ಜಾಪೂರು. ರಾಯಚೂರು,ನ.28- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಡಿ.3 ರಂದು ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಚಂದ್ರಶೇಖರ ಮಿರ್ಜಾಪೂರು ಹೇಳಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಅಂದು ಬೆಳಿಗ್ಗೆ 10.30ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಿಚ್ಚಾಲಿ ಮಟಮಾರಿ ಗಬ್ಬೂರು ಸಾವಿರ ದೇವರ ಸಂಸ್ಥಾನ ಮಠ ವೀರಭದ್ರ ಶಿವಾಚಾರ್ಯ ಶ್ರೀ ಗಳು, ಸೇರಿದಂತೆ ಅನೇಕ ಮಠಾಧೀಶರು ವಹಿಸಲಿದ್ದು ,ಉದ್ಘಾಟನೆಯನ್ನು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ನೆರವೇರಿಸಲಿದ್ದು , ಬಯಲು ಸಿರಿ ಬೆಳಕು ಪ್ರಶಸ್ತಿಯನ್ನು ಬಿ.ಎಸ್ ಪರಮಶಿವಯ್ಯ ರವರಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಪ್ರದಾನ ಮಾಡಲಿದ್ದು, ಅಧ್ಯಕ್ಷತೆಯನ್ನು ಶಾಸಕ ಡಾ.ಶಿವರಾಜ ಪಾಟೀಲ್ ವಹಿಸಲಿದ್ದು ತ್ರಿಕಾಲ ಸತ್ಯ ಸಂಗ್ರಹ ಗ್ರಂಥ ಬಿಡುಗಡೆಯನ್ನು ಶಾಸಕ ಹಂಪನಗೌಡ ಬಾದರ್ಲಿ ಮಾಡಲಿದ್ದು ಅತಿಥಿಗಳಾಗಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆಂದರು.
ಎಸ್ಸೆಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90 ಅಂಕ ಗಳಿಸಿದ ಸುಮಾರು 150 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಬಲ್ಲಟಗಿ ಬಸನಗೌಡ, ಪರಮೇಶ್ವರ್ ಸಾಲಿಮಠ,ಶಿವಯೋಗಿ ಪಾಟೀಲ್, ಧೋತರಬಂಡಿ ಮಲ್ಲಿಕಾರ್ಜುನ ಇನ್ನಿತರರು ಇದ್ದರು.
Comments
Post a Comment