ಪತ್ರಕರ್ತರು ಹಾಗೂ ಪೊಲೀಸ್ ಮತ್ತು ಕಂದಾಯ ಇಲಾಖೆ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಎಲ್ಲರು ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಿ- ಜಿಲ್ಲಾಧಿಕಾರಿ
ಪತ್ರಕರ್ತರು ಹಾಗೂ ಪೊಲೀಸ್ ಮತ್ತು ಕಂದಾಯ ಇಲಾಖೆ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಎಲ್ಲರು ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಿ- ಜಿಲ್ಲಾಧಿಕಾರಿ
ರಾಯಚೂರು,ನ.19- ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನಿಂದ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಪತ್ರಕರ್ತರು, ಪೋಲೀಸ್, ಕಂದಾಯ ಇಲಾಖೆ ತಂಡಗಳ ನಡುವೆ ಇಂದು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಈ ವೇಳೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ ಸದಾ ಕೆಲಸದಲ್ಲಿ ತೊಡಗಿರುವ ಪತ್ರಕರ್ತರು, ಪೊಲೀಸರು, ಆಡಳಿತ ವಿಭಾಗ ಇಂದು ಸೌಹಾರ್ದ ಕ್ರೀಡಾಕೂಟ ಆಡುತ್ತಿರುವುದು ಸಂತೋಷ. ಎಲ್ಲರೂ ಕ್ರೀಡಾಭಾವನೆಯಿಂದ ಸ್ಪರ್ಧಾತ್ಮಕವಾಗಿ, ಗೆಲುವಿಗಾಗಿ ಆಡಿ. ಒಟ್ಟಿಗೆ ಸೇರಿ ಆಡುವ ಸಂದರ್ಭದಲ್ಲಿ ಕಲಿಯುವುದು ಇರುತ್ತದೆ ಹಾಗಾಗಿ ಎಲ್ಲರೂ ಉತ್ತಮವಾಗಿ ಆಡಿ ಎಂದು ಶುಭ ಹಾರೈಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಕ್ರೀಡಾಕೂಟಗಳ ಹಿನ್ನೆಲೆ ವರ್ಷದಲ್ಲಿ ಒಂದು ಬಾರಿ ಮಾತ್ರ ನಾವು ಒಟ್ಟಿಗೆ ಸೇರುತ್ತೇವೆ. ದೈಹಿಕ, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಪತ್ರಕರ್ತರು ಒತ್ತಡದಲ್ಲಿ ಕೆಲಸ ಮಾಡುತ್ತೀರಿ. ಬೈಕ್ ಮೇಲೆ ಓಡಾಡುವಾಗ ಹೆಲ್ಮೆಟ್ ಧರಿಸಿ ಓಡಾಡಿ ಸಂಚಾರಿ ನಿಯಮ ಪಾಲಿಸಿ ಎಂದು ಸಲಹೆ ನೀಡಿ ಮೂರು ತಂಡಗಳಿಗೆ ಶುಭಹಾರೈಸಿದರು.
ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ರಿಪೋರ್ಟರ್ಸ ಗಿಲ್ಡ್ ಅಧ್ಯಕ್ಷ ಚನ್ನಬಸವಣ್ಣ, ಪ್ರಧಾನ ಕಾರ್ಯದರ್ಶಿ ವಿಜಯ ಜಾಗಟಗಲ್ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಾಷ ಹಟ್ಟಿ, ಹಿರಿಯ ಪತ್ರಕರ್ತರಾದ ಬಿ.ವೆಂಕಟಸಿಂಗ್, ಬಸವರಾಜ ನಾಗಡದಿನ್ನಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.




Comments
Post a Comment