ನಾಳೆ ನಗರದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮ: ಬಿ.ವೆಂಕಟ್ ಸಿಂಗ್ ರವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ -ಗುರುನಾಥ.
ನಾಳೆ ನಗರದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮ: ಬಿ.ವೆಂಕಟ್ ಸಿಂಗ್ ರವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ -ಗುರುನಾಥ. ರಾಯಚೂರು,ನ.25- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಯಚೂರು ರಿಪೋರ್ಟ್ರಸ್ ಗಿಲ್ಡ್ ಸಂಯುಕ್ತಾಶ್ರಯದಲ್ಲಿ ನ.26 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಆರ್.ಗುರುನಾಥ ಹಾಗೂ ರಾಯಚೂರು ರಿಪೋರ್ಟ್ರಸ್ ಗಿಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಹೇಳಿದರು. ಅವರಿಂದು ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ನಾಳೆ ಬೆಳಿಗ್ಗೆ 11ಕ್ಕೆ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು ಉದ್ಘಾಟನೆಯನ್ನು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ನೆರವೇರಿಸಲಿದ್ದು ಪ್ರಾಸ್ತಾವಿಕವಾಗಿ ರಾಯಚೂರು ರಿಪೋರ್ಟ್ರಸ್ ಗಿಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಮಾತನಾಡಲಿದ್ದು , ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಗುರುನಾಥ ವಹಿಸಲಿದ್ದಾರೆ ಎಂದರು. ಅತಿಥಿಗಳಾಗಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಎಸ್ಪಿ ನಿಖಿಲ್.ಬಿ, ಜಿ.ಪಂ ಸಿಇಓ ಪಾಂಡ್ವೆ ರಾಹುಲ್ ತುಕಾರಾಂ, ಹಿರಿಯ ಸಹಾಯಕ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ಸೇರಿದಂತೆ ಇತರರು ಆಗಮಿಸಲಿದ್ದಾರೆಂದರು.
ರಾಯಚೂರು ರಿಪೋರ್ಟ್ರಸ್ ಗಿಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದೆ ಕಳೆದ ಒಂದು ವಾರದಿಂದ ಕ್ರಿಕೆಟ್, ಚೆಸ್, ಕೇರಂ, ಶೆಟಲ್ ಬ್ಯಾಡ್ಮಿಂಟನ್ ಮುಂತಾದ ಕ್ರೀಡಾಕೂಟ, ಉಚಿತ ಆರೋಗ್ಯ ಶಿಬಿರ, ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅವರು ನಾಳೆ ನಡೆಯುವ ಕಾರ್ಯಕ್ರಮದಲ್ಲಿ ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ನಡೆಯಲಿದ್ದು ಪತ್ರಿಕಾ ಕ್ಷೇತ್ರದಲ್ಲಿ ಜೀವಮಾನದ ಸಾಧನೆಗಾಗಿ ಹಿರಿಯ ಪತ್ರಕರ್ತ ಬಿ.ವೆಂಕಟ್ ಸಿಂಗ್ ರವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಾಷಾ ಹಟ್ಟಿ, ರಾಯಚೂರು ರಿಪೋರ್ಟ್ರಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವಿಜಯ ಜಾಗಟಗಲ್ ಇದ್ದರು.
Comments
Post a Comment